ಕರಾವಳಿ

ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)

ಕುಂದಾಪುರ: ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಪ್ರೀತಮ್ ಅವರು ಬಿದ್ಕಲ್‌ಕಟ್ಟೆ ನಿವಾಸಿ ಗಣಪತಿ ಪೂಜಾರಿ-ನಾಗರತ್ನಾ ದಂಪತಿಯ ಇಬ್ಬರ ಮಕ್ಕಳ ಪೈಕಿ ಹಿರಿಯ ಪುತ್ರ. ತಂದೆ ಗಣಪತಿ ಶ್ರೀ ಲಕ್ಷ್ಮೀ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಕಂಡಕ್ಟರ್. ತಾಯಿ ನಾಗರತ್ನಾ ಗೃಹಿಣಿ. ಎಲ್.ಕೆ.ಜಿ.ಯಿಂದಲೂ ಈತ ಮದರ್ ಥೆರೆಸಾ ಸಂಸ್ಥೆಯಲ್ಲಿ ಕಲಿತಿದ್ದ.

‘ಕನ್ನಡಿಗವರ್ಲ್ಡ್’ಗೆ ಪ್ರತಿಕ್ರಿಯಿಸಿದ ಸಾಧಕ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ, ಅಂದಿನ ಪಾಠವನ್ನು ಅಂದೇ ಕಣ್ಣುಹಾಯಿಸುತ್ತಿದ್ದೆ. ಪಠ್ಯವನ್ನು ಓದಿ ಮುಗಿಸಲು ತಿಂಗಳ ಗುರಿಯನ್ನು ಇಟ್ಟುಕೊಂಡಿದ್ದೆ. ಪೋಷಕರು ಹಾಗೂ ವಿದ್ಯಾಸಂಸ್ಥೆಯವರ ಪ್ರೋತ್ಸಾಹ, ಮಾರ್ಗದರ್ಶನ ಸಾಧನೆಗೆ ಪ್ರೇರಣೆ. ಮುಂದೆ ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿಎಸ್ ಓದಿ ಜೆಇ ಪರೀಕ್ಷೆ ಬರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆಯ ಸಂಸ್ಥಾಪಕರಾದ ಶಮಿತಾ ರಾವ್ ಬಲ್ಮಠ, ರೇನಿಟಾ ಲೋಬೋ ಮಾತನಾಡಿ, 28 ವರ್ಷಗಳ ಹಿಂದೆ ಹಳ್ಳಿಯಲ್ಲಿ ಕಟ್ಟಿದ ವಿದ್ಯಾಸಂಸ್ಥೆ ಇದೀಗಾ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಮೂಲಕ ಸಾರ್ಥಕತೆ ಲಭಿಸಿದೆ. ಶಾಲೆಯ ವಿದ್ಯಾರ್ಥಿ‌ ಪ್ರೀತಮ್ ಪೂಜಾರಿ‌ ಸಾಧನೆಯು ಸಂತಸ ತಂದಿದೆ. ಆತ ವಿದ್ಯಾಭ್ಯಾಸ ಹಾಗೂ ಇತರ ಚಟುವಟಿಕೆಯಲ್ಲಿ ಸದಾ ಚುರುಕಾಗಿದ್ದ. 625 ಅಂಕ ಪಡೆಯುವ ನಿರೀಕ್ಷೆಯೂ ನಮಗಿತ್ತು. ಆತನು ಪರಿಶ್ರಮದ ಜೊತೆಗೆ ಗುರುಹಿರಿಯರ ಜೊತೆ ವಿನಮೃತೆ ಹೊಂದಿದ್ದ. ಈ ಬಾರಿ ರಾಜ್ಯಮಟ್ಟದ ಕ್ವಿಜ್‌ನಲ್ಲಿ ಎರಡನೇ ಸ್ಥಾನಿಯಾಗಿದ್ದ ಎಂದರು.

Comments are closed.