ಕರಾವಳಿ

ಕಟ್ಕೆರೆ ಗ್ರಾಮದಲ್ಲಿ ನೇತ್ರ ಹಾಗೂ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

Pinterest LinkedIn Tumblr

ಕುಂದಾಪುರ: ಯುವಶಕ್ತಿ ಯುವಕ ಮಂಡಲ (ರಿ)ಕಟ್ಕೆರೆ ಇವರ ವತಿಯಿಂದ ಹಾಗೂ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಶಂಕರನಾರಾಯಣ ಇವರ ನೇತೃತ್ವದಲ್ಲಿ ಕಟ್ಕೆರೆ ಗ್ರಾಮದಲ್ಲಿ ನೇತ್ರ ಹಾಗೂ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಶಿಬಿರದಲ್ಲಿ ಸುಮಾರು 100ಕ್ಕೂ ಹೆಚ್ಚು ಗ್ರಾಮಸ್ಥರು ಭಾಗವಹಿಸಿ ಆರೋಗ್ಯ ಹಾಗೂ ಕಣ್ಣಿನ ತಪಾಸಣೆಯ ಸೌಲಭ್ಯವನ್ನು ಪಡೆದುಕೊಂಡರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ಪ್ರಭಾಕರ್ ಅವರು ಉತ್ತಮ ಆರೋಗ್ಯ ಹಾಗೂ ಕಣ್ಣಿನ ಆರೈಕೆಯ ಮಹತ್ವದ ಕುರಿತು ಜನರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಈ ರೀತಿಯ ಆರೋಗ್ಯ ಶಿಬಿರಗಳು ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದ ಅವರು ಆರೋಗ್ಯ ಜಾಗೃತಿ ಸಂದೇಶ ನೀಡಿದರು.

ವೇದಿಕೆಯಲ್ಲಿ ಲಕ್ಷ್ಮಣ ಶೆಟ್ಟಿ ಕಟ್ಕೆರೆ, ದಯಾನಂದ ಶೆಟ್ಟಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರಾದ ಜಯಂತಿ ಬಿ.ಎಸ್ ಅವರು ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಗ್ರಾಮಸ್ಥರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದರು.

ಶಿಬಿರವು ಅತ್ಯಂತ ಯಶಸ್ವಿಯಾಗಿ ನೆರವೇರಿದ್ದು, ಇದಕ್ಕಾಗಿ ವೈದ್ಯಕೀಯ ತಂಡ, ಸಂಘಟಕರು, ಸ್ವಯಂಸೇವಕರು ಹಾಗೂ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.

Comments are closed.