ಉಡುಪಿ: ಶಿರ್ವ ಸಮೀಪದ ಪಿಲಾರು ಗ್ರಾಮದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೈಂಟ್ ಫ್ರಾನ್ಸಿಸ್ ಜೆವಿಯರ್ ಚರ್ಚ್ ಎದುರು ಭಾಗದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ.

ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಅವರಿಗೆ ಗುಂಡಿಕ್ಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ರವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ವೈದ್ಯರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಶೂಟೌಟ್ಗೆ ಮಾಡಲು ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆ ನಡೆದ ಸ್ಥಳಕ್ಕೆ ಶಿರ್ವಾ ಪೊಲೀಸರು ಹಾಗೂ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ಸ್ಥಳ ಪರಿಶೀಲನಾಧಿಕಾರಿಯವರ ತಂಡ(SOCO) ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ತನಿಖೆ ಮುಂದುವರಿದಿದೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
Comments are closed.