ಕರಾವಳಿ

ಕುಂದಾಪುರ, ಮುದರಂಗಡಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರ ಕಾರ್ಯವೈಖರಿಗೆ ಸಾಮಾಜಿಕ ಕಾರ್ಯಕರ್ತ ಅಶೋಕ್ ಪೂಜಾರಿ ಬೀಜಾಡಿ ಶ್ಲಾಘನೆ

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಮುದರಂಗಡಿಯಲ್ಲಿ ವಾರದ ಅಂತರದಲ್ಲಿ ನಡೆದ ಕೊಲೆ ಪ್ರಕರಣಗಳನ್ನು ಕ್ಷಿಪ್ರವಾಗಿ ಬೇಧಿಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಗೆ ಸಾಮಾಜಿಕ ಕಾರ್ಯಕರ್ತರಾದ ಅಶೋಕ್ ಪೂಜಾರಿ ಬೀಜಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಪೊಲೀಸರು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತ್ವರಿತ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿರುವುದು ಶ್ಲಾಘನೀಯ ಎಂದು ಅವರು ಹೇಳಿದ್ದಾರೆ.

ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆಯಿಂದ ಜನರಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಹಾಗೂ ಪೊಲೀಸ್ ಇಲಾಖೆಯ ಮೇಲಿನ ಭರವಸೆ ಮತ್ತಷ್ಟು ಹೆಚ್ಚಿದೆ. ಸಂಕೀರ್ಣ ಪ್ರಕರಣಗಳನ್ನು ತಾಂತ್ರಿಕ ಹಾಗೂ ವೈಜ್ಞಾನಿಕ ತನಿಖೆಯ ಮೂಲಕ ತ್ವರಿತವಾಗಿ ಬಗೆಹರಿಸುವ ಮೂಲಕ ಉಡುಪಿ ಜಿಲ್ಲಾ ಪೊಲೀಸರು ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿದ್ದಾರೆ ಎಂದು ಅಶೋಕ್ ಪೂಜಾರಿ ಬೀಜಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments are closed.