ಕರಾವಳಿ

ಕುಂದಾಪುರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ‘ತಿರಂಗಾ ಯಾತ್ರೆ’

Pinterest LinkedIn Tumblr

ಕುಂದಾಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರ, ಹಗಲಿರುಳೆನ್ನೆದ ಗಡಿ ಕಾಯುತ್ತಿರುವ ವೀರ ಯೋಧರ ಸ್ಮರಣೆಗಾಗಿ ನಾವು ಈ ತಿರಂಗಾ ಯಾತ್ರೆಯನ್ನು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಅವರು ಕುಂದಾಪುರ ಬಿಜೆಪಿ ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ ಮಂಗಳವಾರ ತಿರಂಗಾ ಯಾತ್ರೆಯ ಅಂಗವಾಗಿ ಶಾಸ್ತ್ರಿ ಸರ್ಕಲ್ ಬಳಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಪ್ರ. ಕಾರ್ಯದರ್ಶಿ ಪುಣ್ಯಪಾಲ್ ಮಾತನಾಡಿದರು. ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಕುಮಾರ್ ಶೆಟ್ಟಿ ಶುಭಹಾರೈಸಿದರು.

ಜಿಲ್ಲಾ ಪ್ರ. ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಪ್ರ. ಕಾರ್ಯದರ್ಶಿಗಳಾದ ಚೇತನ್ ಖಾರ್ವಿ, ಸಂಪತ್, ಪ್ರಮುಖರಾದ ರಾಜೇಶ್ ಕಾವೇರಿ, ವಿಠಲ ಪೂಜಾರಿ, ವಿಜಯ ಕೊಡವೂರು, ರತ್ನಾಕರ್ ಇಂದ್ರಾಳಿ, ಶಂಕರ್ ಕೆ.ಎಸ್., ಸುಧೀರ್ ಕೆ.ಎಸ್., ವಿವಿಧ ಮೋರ್ಚಾಗಳ ಪ್ರಮುಖರು, ಪದಾಧಿಕಾರಿಗಳು, ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಿರಂಗಾ ಯಾತ್ರೆಯು ಶಾಸ್ತ್ರಿ ಸರ್ಕಲ್ ಬಳಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಆರಂಭಗೊಂಡು, ಪಾರಿಜಾತ ಸರ್ಕಲ್ ಆಗಿ, ಮುಖ್ಯ ರಸ್ತೆಯಲ್ಲಿ ಸಾಗಿ, ಹೊಸ ಬಸ್ ನಿಲ್ದಾಣವಾಗಿ, ಮತ್ತೆ ಶಾಸ್ತ್ರ ಸರ್ಕಲ್ ನಲ್ಲಿ ಸಮಾಪನಗೊಂಡಿತು.

ಮಂಡಲದ ಅಧ್ಯಕ್ಷ ಸುರೇಶ್ ಶೆಟ್ಟಿ ಸ್ವಾಗತಿಸಿ, ಪ್ರ. ಕಾರ್ಯದರ್ಶಿ ಸತೀಶ್ ಪೂಜಾರಿ ನಿರೂಪಿಸಿದರು.

Comments are closed.