ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು.
ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಿದಾಗ ಚಿರಾಗ್ ಪೂಜಾರಿ ಹಾಗೂ ಮೊಹಮ್ಮದ್ ಇರ್ಷಾದ್ ಎಂಬವರು ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿರುವುದು ಕಂಡುಬಂದಿದೆ. ಅದರಂತೆ ಇವರಿಬ್ಬರನ್ನು ಆ.12ರಂದು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.
Comments are closed.