ಕರಾವಳಿ

ಅಮಾಸೆಬೈಲು | ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Pinterest LinkedIn Tumblr

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಕುಂದಾಪುರ-2 ತಾಲೂಕಿನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನೇತ್ರ ಚಾರಿಟೇಬಲ್‌ ಟ್ರಸ್ಟ್, ಉಡುಪಿ, ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಅಮಾಸೆಬೈಲು ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದಲ್ಲಿ ‘ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆ ಶಿಬಿರ’ ವನ್ನು ನಡೆಯಿತು.

ಅಮಾಸೆಬೈಲು ಪೊಲೀಸ್‌ ಠಾಣೆಯ ಉಪನಿರೀಕ್ಷಕಿ ಸುಧಾರಾಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಧ.ಗ್ರಾ. ಯೋಜನೆ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ತಾಲೂಕಿನ ಯೋಜನಾಧಿಕಾರಿ ಸುಧೀರ್‌ ಹಂಗಳೂರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿ, ಯೋಜನೆಯ ಹಲವು ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಪರಿಚಯಿಸಿದರು.

ಪ್ರಸಾದ ನೇತ್ರಾಲಯ ಇದರ ಸಾರ್ವಜನಿಕ ಸಂಪರ್ಕ ಅಧಿಕಾರಿ ಮೋಹನ್‌ದಾಸ್‌, ಕಣ್ಣಿನ ತಪಾಸಣಾ ಶಿಬಿರದ ಬಗ್ಗೆ, ಶಿಬಿರದಲ್ಲಿ ನಡೆಸುವ ತಪಾಸಣೆಗಳ ಬಗ್ಗೆ, ಪೊರೆ ಇದ್ದಲ್ಲಿ ಆಸ್ಪತ್ರಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡುವ ಬಗ್ಗೆ ಹಾಗೂ ನೇತ್ರದಾನದ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿದರು.

ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ಕೃಷ್ಣ ಪೂಜಾರಿ‌ ಮಾತನಾಡಿದರು.

ಶಿಬಿರದಲ್ಲಿ ಉಚಿತ ಬಿಪಿ ಶುಗರ್‌ ತಪಾಸಣೆಯನ್ನು ಮಾಡಲಾಗಿದ್ದು, 150 ಕ್ಕೂ ಅಧಿಕ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

ಈ ಸಂದರ್ಭ ಅಮಾಸೆಬೈಲು ಪೊಲೀಸ್‌ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಜ್ಯೋತಿ, ಸಿಬ್ಬಂದಿ ವಿಮಲ, ಅಮಾಸೆಬೈಲು ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಣ್‌ ಪೂಜಾರಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಮಾಸೆಬೈಲು ವಲಯದ ಅಧ್ಯಕ್ಷ ಭೋಜರಾಜ್‌, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾಶಿವ ಶೆಟ್ಟಿ, ಸ್ಥಳೀಯ ಒಕ್ಕೂಟದ ಅಧ್ಯಕ್ಷ ನಾಗೇಂದ್ರ, ಪ್ರಸಾದ್‌ ನೇತ್ರಾಲಯ ಉಡುಪಿ ಇಲ್ಲಿನ ನೇತ್ರ ತಜ್ಞೆ ಡಾ.ಸಂಜನಾ ಹೆಗಡೆ, ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಪವಿತ್ರ, ಪೂರ್ಣಿಮಾ ಉಪಸ್ಥಿತರಿದ್ದರು.

Comments are closed.