ಕನ್ನಡ ವಾರ್ತೆಗಳು

37 ನೇ ಲಕ್ಷ ದೀಪೋತ್ಸವ ಸಂಭ್ರಮ : ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ.

Pinterest LinkedIn Tumblr

darma_sthala_deepustv_pic

ಮಂಗಳೂರು, ನ. 19 : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ವಿಶೇಷ ಪೂಜೆ ಪುನಸ್ಕಾರದ ಜತೆಗೆ ಸರ್ವ ಧರ್ಮ ಸಮ್ಮೇಳನ, ಲಕ್ಷದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಿದೆ. ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆದ ಕಾರ್ಯಕ್ರಮಗಳ ಸಚಿತ್ರ ವರದಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ,ಬಿ, ಇಬ್ರಾಹಿಂ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಎಸ್‌ಡಿ‌ಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್. ಪ್ರಭಾಕರ್ ಮುಂತಾದವರು ಉಪಸ್ಥಿತರಿದ್ದರು.

darma_sthala_deepustv_1

ಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ವಸ್ತು ಪ್ರದರ್ಶನವೂ ಮನೋರಂಜನೆಯೊಂದಿಗೆ ಜ್ಞಾನಾಭಿವೃದ್ಧಿಯ ವೇಗವರ್ಧಕವಾಗಿದೆ ಎಂದು ಹೇಳಿದರು. ಇಂದು ಜ್ಞಾನ ಸಂಪಾದನೆಗೆ ಹಲವಾರು ಅವಕಾಶಗಳಿವೆ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಹಿಂದಿನ ಕಾಲದ ಶ್ರೇಣೀಕೃತ ಸಮಾಜದಲ್ಲಿ ಜ್ಞಾನವನ್ನು ಗುಪ್ತವಾಗಿ ಬಚ್ಚಿಟ್ಟುಕೊಳ್ಳುವ ಸಂಪ್ರದಾಯವಿತ್ತು. ಆದರೆ, ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷಿಪ್ರ ಬೆಳವಣಿಗೆಯಿಂದಾಗಿ ಇಂದು ಜಾಗತೀಕರಣದ ನೆಲೆಯಲ್ಲಿ ಕ್ರಾಂತಿಕಾರಿ ಪರಿವರ್ತನೆಯಾಗಿ ಜನರಿಗೆ ಹಲವಾರು ಅವಕಾಶ ದೊರಕಿವೆ ಎಂದರು.

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮೊದಲಾದ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದು ಹೇಳಿದ ಜಿಲ್ಲಾಧಿಕಾರಿ ಅವರು ಹೆಗ್ಗಡೆಯವರನ್ನು ಅಭಿನಂದಿಸಿದರು.

ವಸ್ತು ಪ್ರದರ್ಶನದಲ್ಲಿ ಕೃಷಿ, ವಾಣಿಜ್ಯ, ಬ್ಯಾಂಕಿಂಗ್, ಶಿಕ್ಷಣ, ಉದ್ಯೋಗ ಮೊದಲಾದ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ 194 ಮಳಿಗೆಗಳಿವೆ.

Write A Comment