ಕನ್ನಡ ವಾರ್ತೆಗಳು

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಗೆ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪ್ರದಾನ

Pinterest LinkedIn Tumblr

ಕುಂದಾಪುರ : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ನೀಡಲಾಗುವ ರಾಜ್ಯದ ಐದು ಉತ್ತಮ ಸೌಹಾರ್ದ ಸಹಕಾರ ಸಂಸ್ಥೆಗಳ ಪ್ರಶಸ್ತಿಯನ್ನು ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದಲ್ಲಿರುವ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತಕ್ಕೆ ಪ್ರದಾನ ಮಾಡಲಾಯಿತು.

Gangolli_Sahakari_Prashasti
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇವರ ನೇತೃತ್ವದಲ್ಲಿ ಬೆಳಗಾವಿಯ ಎಲ್ಲಾ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನ.೨೦ರಂದು ಬೆಳಗಾವಿಯ ಗಾಂಧಿ ಭವನದಲ್ಲಿ ಜರಗಿದ ೬೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯದ ಸಚಿವರಾದ ಎಚ್.ಎಸ್.ಮಹದೇವ ಪ್ರಸಾದ್, ಸತೀಶ ಜಾರಕಿಹೊಳಿ, ಸಂಸದ ಪ್ರಕಾಶ ಹುಕ್ಕೇರಿ, ಮಾಜಿ ಸಚಿವರು, ಇಲಾಖೆಯ ಅಧಿಕಾರಿಗಳು, ಸಹಕಾರಿಯ ಗಣ್ಯರು, ಇಲಾಖೆಯ ಪ್ರಮುಖರು ಉಪಸ್ಥಿತರಿದ್ದರು.

Write A Comment