ಕನ್ನಡ ವಾರ್ತೆಗಳು

ಎಂಪಿ-ಎಂಎಲ್‌ಎ ಅನುದಾನ ಕಾಮಗಾರಿ: ತ್ವರಿತಗೊಳಿಸಲು ಸಚಿವರ ಸೂಚನೆ

Pinterest LinkedIn Tumblr

SR.Patil_Press_1

ಮಂಗಳೂರು,ನ.22: ಶಾಸಕರ ಮತ್ತು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃಧ್ದಿ ಅನುದಾನದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಯೋಜನೆ ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ಸೂಚಿಸಿದ್ದಾರೆ.

ಅವರು ಶನಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಎಂಪಿ-ಎಂಎಲ್ ಎ ಅನುದಾನ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಶಾಸಕರ ಮತ್ತು ಸಂಸದರ ಅನುದಾನದಿಂದ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದ್ದರೂ,ಕಾಮಗಾರಿ ಬಹಳ ನಿಧಾನಗತಿಯಲ್ಲಿ ನಡೆಯುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು ಮುಂದಿನ ೩ ತಿಗಳೊಳಗೆ ಎಲ್ಲಾ ಬಾಕಿ ಕಾಮಗಾರಿಗಳನ್ನು ಪೂರ್ತಿಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

SR.Patil_Press_2

 

ನಿಗಧಿತ ಅವಧಿಯೊಳಗೆ ಕಾಮಗಾರಿ ಮುಗಿಸಿ,ಬಳಕೆ ಪ್ರಮಾಣ ಪತ್ರ ಸಲ್ಲಿಸದಿದ್ದರೆತೀವ್ರ ಕ್ರಮಜರುಗಿಸುವುದಾಗಿ ಸಚಿವರು ತಿಳಿಸಿದರು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಸಕರ ಅನುದಾನದ  359 ಕಾಮಗಾರಿ,ಲೋಕಸಭಾ ಸದಸ್ಯರ ಅನುದಾನದ 209 ಕಾಮಗಾರಿ ಹಾಗೂ ರಾಜ್ಯ ಸಭಾ ಸದಸ್ಯರ 43 ಕಾಮಗಾರಿಗಳು ಬಾಕಿ ಇವೆ.ಇವುಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು ಎಂದು ಸಚಿವರು ಹೇಳಿದರು.

2013-14ನೇ ವರ್ಷದ ವರೆಗಿನ ಅನುದಾನದ ಎಲ್ಲ ಕಾಮಗಾರಿ ಆದ್ಯತೆಯಲ್ಲಿ ಕೈಗೆತ್ತಿಕೊಳ್ಳಲು ಎಸ್.ಆರ್ .ಪಾಟೀಲ್ ತಿಳಿಸಿದರು.  ಸಭೆಯಲ್ಲಿ ಶಾಸಕರಾದ ಜೆ.ಆರ್.ಲೋಬೋ,ಐವನ್ ಡಿ ಸೋಜಾ,ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್‍ಯ ನಿರ್ವಾಹಕ ಅಧಿಕಾರಿ ತುಳಸಿ ಮದ್ದಿನೇನಿ ಮತ್ತಿತರರು ಉಪಸ್ಥಿತರಿದ್ದರು.

Write A Comment