ಕನ್ನಡ ವಾರ್ತೆಗಳು

ಬಂಟರ ಸಂಘ ಜೋಗೇಶ್ವರಿ – ದಹಿಸರ್ ಸಮಿತಿಯ ಪದಾಧಿಕಾರಿಗಳ ಪದಗ್ರಹಣ

Pinterest LinkedIn Tumblr

bunts_sanga_mumbai_1

ವರದಿ : ಈಶ್ವರ ಎಂ. ಐಲ್

ಚಿತ್ರ : ದಿನೇಶ್ ಕುಲಾಲ್

ಮುಂಬಯಿ : ಬಂಟರ ಸಂಘ, ಮುಂಬಯಿ ಇದರ ಜೋಗೇಶ್ವರಿ – ದಹಿಸರ್ ನೂತನ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನ. 22 ರಂದು ಕಾಂದಿವಲಿ ಅವೆನ್ಯೂ ಹೋಟೇಲಿನ ಸಭಾಂಗಣದಲ್ಲಿ ಜರಗಿತು.

ಸಭಾಕಾರ್ಯಕ್ರಮಗಳನ್ನು ಉದ್ಘಾಟಿಸುತ್ತಾ ಅಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿಯವರು ಊರಿನಲ್ಲಿರುವ ಸಮಾಜ ಬಾಂಧವರಿಗೆ ನಾವು ಸಹಕರಿಸಬೇಕಾಗಿದೆ ಅಲ್ಲದೆ ಸಮಾಜದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಸದಿಂದ ಬೋರಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲಾಗುವುದು ಎಂದರು.

bunts_sanga_mumbai_2

ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೂತನ ಪ್ರಾದೇಶಿಕ ಸಮಿತಿಗೆ ಅಭಿನಂದನೆ ಸಲ್ಲಿಸಿದರು.

ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ವಿಜಯ್ ಆರ್. ಭಂಡಾರಿ ಅವರು ಆಯ್ಕೆಯಾಗಿದ್ದು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ವಿನೋದಾ ಡಿ. ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ನಿರ್ಗಮನ ಕಾರ್ಯಧ್ಯಕ್ಷರುಗಳು ನೂತನ ಕಾರ್ಯಾಧ್ಯಕ್ಷರುಗಳಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

bunts_sanga_mumbai_4 bunts_sanga_mumbai_3

ವೇದಿಕೆಯಲ್ಲಿ ಹೋಟೇಲು ಉದ್ಯಮಿ ರಘುರಾಮ ಶೆಟ್ಟಿ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ಗೌ, ಪ್ರ. ಕಾರ್ಯದರ್ಶಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಕೋಶಾಧಿಕಾರಿ ಸಿ‌ಎ ಐ ಆರ್ ಶೆಟ್ಟಿ, ಮಹೇಶ್ ಶೆಟ್ಟಿ, ಕಿಶೋರ್ ಕುಮಾರ್ ಶೆಟ್ಟಿ, ವಿವೇಕ್ ಶೆಟ್ಟಿ, ಮುಂಡಪ್ಪ ಪಯ್ಯಡೆ, ಮನೋಹರ ಶೆಟ್ಟಿ, ಪದ್ಮಾವತಿ ಶೆಟ್ಟಿ, ರವಿ ಶೆಟ್ಟಿ, ಮುದ್ದಣ್ಣ ಶೆಟ್ಟಿ, ಪ್ರೇಮ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Write A Comment