ಕನ್ನಡ ವಾರ್ತೆಗಳು

ಟಿ.ವಿ-9 ಪ್ರಸಾರಕ್ಕೆ ತಡೆ : ಸಚಿವ ಡಿಕೆಶಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪತ್ರಕರ್ತರ ಸಂಘದಿಂದ ಮನವಿ

Pinterest LinkedIn Tumblr

TV9_DC_MANAVI_

ಮಂಗಳೂರು : ಸರ್ಕಾರದ ವಿರುದ್ಧ ವರದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಿ ಟಿವಿ9 ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್‌ಗಳಿಗೆ ಸೂಚನೆ ನೀಡಿರುವ ಸರಕಾರದ ಧೋರಣೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳವಾರ ಮುಂಜಾನೆ ಜಿಲ್ಲಾಧಿಕಾರಿ ಇಬ್ರಾಹಿಂ ಅವರಿಗೆ ಮನವಿಯನ್ನು ಸಲ್ಲಿಸಿತು.ರಾಜ್ಯ ಸರಕಾರವು ಟಿ.ವಿ.9 ಮೇಲೆ ಹೇರಿದ ನಿರ್ಬಂಧವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಅಗ್ರಹಿಸಿದೆ.

ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಸೂಚನೆಯಂತೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಿನ್ನೆ ಸಂಜೆಯಿಂದಲೇ ಟಿವಿ9 ಪ್ರಸಾರವನ್ನು ಸ್ಥಗಿತಗೊಳಿಸಲಾಗಿದೆ.

ಟಿವಿ 9 ಚಾನೆಲ್ ಅನ್ನು ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್ ಗಳಿಗೆ ಆದೇಶ ನೀಡುವ ಮೂಲಕ ಸರ್ಕಾರ ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾದ ಪತ್ರಿಕೋದ್ಯಮದ ಕತ್ತು ಹಿಸುಕುವ ಸಂವಿಧಾನ ಬಾಹಿರ ಕೆಲಸ ಮಾಡಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ ರಾಜ್ಯ ಸರಕಾರ ಮಾಡುತ್ತಿದ್ದು, ಈ ಕೂಡಲೇ ಚಾನೆಲ್ ಮೇಲಿನ ನಿರ್ಬಂಧವನ್ನು ವಾಪಸ್ ಪಡೆಯಬೇಕು, ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಈ ಸಂದರ್ಭ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಆಗ್ರಹಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವೆಂಕಟೇಶ್ ಬಂಟ್ವಾಳ್, ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ ಹಾಗೂ ಸಂಘದ ಇತರ ಪದಾಧಿಕಾರಿಗಳು, ಸದಸ್ಯರು ಮತ್ತು ಟಿವಿ9 ವರದಿಗಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Write A Comment