ಕನ್ನಡ ವಾರ್ತೆಗಳು

ಮಲೇರಿಯಾ ಪ್ರಕರಣ ಹೆಚ್ಚಳ : ಜನಜಾಗೃತಿ ಚುರುಕುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Pinterest LinkedIn Tumblr

 

Dc_Meet_Rta

ಮಂಗಳೂರು ನವೆಂಬರ್.25: ಮಂಗಳೂರು ನಗರದಲ್ಲಿ ದಿನೆ ದಿನೆ ಮಲೇರಿಯಾ ಪ್ರಕರಣಗಳು ಹೆಚ್ಚಾಗುತ್ತಿದ್ದದು ಆರೋಗ್ಯ ಇಲಾಖೆ, ಮಂಗಳೂರು ಮಹಾ ನಗರ ಪಾಲಿಕೆ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನಗರದಲ್ಲಿ ವಾಸಿಸುತ್ತಿರುವ ಜನರಲ್ಲಿ ಮಲೇರಿಯಾ ಕುರಿತಂತೆ ಜಾಗೃತಿ ಮೂಡಿಸುವ ಕೆಲಸವನ್ನು ಇನ್ನಷ್ಟು ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಸೂಚಿಸಿದ್ದಾರೆ.

ಅವರು ಇಂದು ತಮ್ಮ ಕಛೇರಿಯಲ್ಲಿ ನಡೆದ ಜಿಲ್ಲೆಯಲ್ಲಿ ಮಲೇರಿಯ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸುತ್ತಿದ್ದರು. ಕಳೆದ ವರ್ಷಕ್ಕಿಂತ ಈ ವರ್ಷ ಮಂಗಳೂರು ನಗರದಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಮಲೇರಿಯಾ ಪ್ರಕರಣಗಳ ಕುರಿತಂತೆ ವರದಿ ನೀಡದ ಆಸ್ಪತ್ರೆಗಳ ವಿರುದ್ದ ಕ್ರಮಕೈಗೊಂಡು ಅಂತಹ ಆಸ್ಪತ್ರೆಗಳನ್ನು ಬಂದ್ ಮಾಡುವಂತೆ ಅವರು ಮಹಾನಗರಪಾಲಿಕೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಮಹಾನಗರಪಾಲಿಕೆ ಆರೋಗ್ಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ಮಾಡುವ ಮೂಲಕ ಮಂಗಳೂರು ನಗರದಲ್ಲಿ ಮಲೇರಿಯಾ ಇನ್ನಷ್ಟು ಅನಾಹುತಗಳನ್ನು ಮಾಡದಂತೆ ತಡೆಯಬೇಕೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.

ನವೆಂಬರ್ ಮಾಹೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ 17 ಜನ ಮಲೇರಿಯಾ ರೋಗದಿಂದ ಮೃತರಾಗಿದ್ದಾರೆ, ಇವರಲ್ಲಿ ಬೆಳ್ತಂಗಡಿಯ ೩ಜನ ಸೇರಿದ್ದಾರೆ ಎಂದು ಸಭೆಯಲ್ಲಿ ಡಾ|ವೀರಪ್ಪ ತಿಳಿಸಿದರು.

ಸಭೆಯಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ರಾಮಕೃಷ್ಣ, ವೆನ್ಲಾಕ್ ಜಿಲ್ಲಾಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ|ವೀರಪ್ಪ, ಡಾ|ಶಕುಂತಳಾ ಮುಂತಾದವರು ಹಾಜರಿದ್ದರು.

Write A Comment