ಕನ್ನಡ ವಾರ್ತೆಗಳು

ನೈತಿಕ ಪೊಲೀಸ್ ಗಿರಿ ವಿರುದ್ಧ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ : ಆರ್ ಹಿತೇಂದ್ರ

Pinterest LinkedIn Tumblr

commisioner_r_hitendra

ಮಂಗಳೂರು, ನ. 29: ನಗರದಲ್ಲಿ ನೈತಿಕ ಪೊಲೀಸ್‌ಗಿರಿ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ನಗರದಲ್ಲಿ ಎಲ್ಲಿಯೇ ಇಂತಹ ಚಟುವಟಿಕೆ ಕಂಡುಬಂದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ತಿಳಿಸಿದ್ದಾರೆ.

ಮಂಗಳೂರು ನಗರದ ವಿವಿಧೆಡೆ ಪೊಲೀಸರು ಗಸ್ತು ತಿರುಗುತ್ತಾರೆ. ಯಾರೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಆಯುಕ್ತರು ಭರವಸೆ ನೀಡಿದರು. ನಗರದ ಕನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಕೆಸಿಸಿಐ) ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನರು ತಮ್ಮ ವಾರ್ಡ್‌ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುವವರ ಕುರಿತು ಎಚ್ಚರದಿಂದಿರಬೇಕು. ಸಾಮಾಜಿಕ ಜಾಲ ತಾಣಗಳಲ್ಲಿ ವದಂತಿಗಳನ್ನು ಹಬ್ಬಿಸಿ ಸಮಾಜದಲ್ಲಿ ಗೊಂದಲ ಹಬ್ಬಿಸಲಾಗುತ್ತಿದೆ ಎಂದು ತಿಳಿಸಿದರು

ಶೀಘ್ರ ಸೈಬರ್ ಪೊಲೀಸ್ ಠಾಣೆ: ನಗರದಲ್ಲಿ ಸೀಘ್ರ ಸೈಬರ್ ಪೊಲೀಸ್ ಠಾಣೆ ಆರಂಭಿಸಲಾಗುವುದು. ಅಲ್ಲಿಯವರೆಗೆ ಜನರು ತಮಗೆ ಕಂಡುಬಂದ ಯಾವುದೇ ಸೈಬರ್ ಅಪರಾಧಗಳ ಕುರಿತು ಸಮೀಪದ ಪೊಲೀಸ್ ಠಾಣೆಗೆ ತಿಳಿಸಬೇಕು ಎಂದು ಸೂಚಿಸಿದರು. ಮಂಗಳೂರಿನಲ್ಲಿ ಹಿಂದು ಮತ್ತು ಮುಸ್ಲಿಂ ಸಮುದಾಯದ ಯುವಕ, ಯುವತಿಯರು ಜೊತೆಯಲ್ಲಿ ಸಂಚರಿಸದಂತೆ ಬೆದರಿಕೆ ಹಾಕಿರುವ ಹಾಗೂ ಹಲ್ಲೆ ನಡೆಸಿರುವ ಹಲವು ಪ್ರಕರಣಗಳು ವರದಿಯಾಗಿವೆ ಎಂದು ಆರ್. ಹಿತೇಂದ್ರ ತಿಳಿಸಿದ್ದಾರೆ.

Write A Comment