ಕನ್ನಡ ವಾರ್ತೆಗಳು

ಬೆಂಗಳೂರು-ಮಂಗಳೂರು ಬಸ್ ಗೆ ಬೆಂಕಿ : ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪವಾಡದೃಶ್ಯ ಪಾರು

Pinterest LinkedIn Tumblr

Puttur_Bus_Fire_1

ಮಂಗಳೂರು,ಡಿ.01: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಡಿಸೆಂಬರ್ 1ರ ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಉಪ್ಪಿನಂಗಡಿ ಬಳಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ. ನ್ಯಾಷನಲ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿತ್ತು. ಸುಮಾರು 25 ಪ್ರಯಾಣಿಕರು ಬಸ್ಸಿನಲ್ಲಿದ್ದರು.

ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರು ಕೆಳಗಿದಿದ್ದು ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ 25 ಪ್ರಯಾಣಿಕರಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

ಕಳೆದ ವರ್ಷ ಮೆಹಬೂಬ್‌ನಗರ ಜಿಲ್ಲೆಯ ಪಾಲೆಂನಲ್ಲಿ ಬೆಂಗಳೂರು ಮೂಲದ ಜಬ್ಟಾರ್‌ ಟ್ರಾವೆಲ್ಸ್‌ನ ವೋಲ್ವೋ ಬಸ್‌ ಬೆಂಕಿಗೆ ಆಹುತಿಯಾಗಿತ್ತು. 45 ಜನರು ಘಟನೆಯಲ್ಲಿ ಸಾವನ್ನಪ್ಪಿದ್ದರು. ನಂತರ ಕರ್ನಾಟಕದ ಹಾವೇರಿ ಜಿಲ್ಲೆಯ ಬಳಿ ಬಸ್ ಬೆಂಕಿಗಾಹುತಿಯಾಗಿತ್ತು. ನಂತರ ಸರ್ಕಾರ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು

Write A Comment