ಕನ್ನಡ ವಾರ್ತೆಗಳು

ಶೌಚಾಲಯದ ಗುಂಡಿ ತೆಗೆಯುವ ವೇಳೆ 34 ಚಿನ್ನದ ನಾಣ್ಯಗಳು ಪತ್ತೆ :ನಾಣ್ಯಗಳು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ.

Pinterest LinkedIn Tumblr

gold_coin_photo

ಚಾಮರಾಜನಗರ, ಡಿ.1 : ಚಾಮರಾಜನಗರ ತಾಲೂಕಿನ ಹರದನಹಳ್ಳಿಯಲ್ಲಿ ಶೌಚಾಲಯದ ಗುಂಡಿ ತೆಗೆಯುವ ವೇಳೆ 34 ಚಿನ್ನದ ನಾಣ್ಯಗಳು ಸಿಕ್ಕಿವೆ. ರಾಮಸಮುದ್ರ ಪೊಲೀಸರು ನಾಣ್ಯಗಳನ್ನು ವಶಕ್ಕೆ ಪಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಿದ್ದಾರೆ. ಸೋಮವಾರ ಬೆಳಗ್ಗೆ ಹರದನಹಳ್ಳಿಯ ರಾಮಣ್ಣ ಎಂಬುವವರ ಮನೆಯಲ್ಲಿ ಇಬ್ಬರು ಕಾರ್ಮಿಕರು ಶೌಚಾಲಯ ನಿರ್ಮಾಣಕ್ಕಾಗಿ ಗುಂಡಿಯನ್ನು ಅಗೆಯುತ್ತಿದ್ದರು. ಈ ಸಂದರ್ಭದಲ್ಲಿ 32 ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ತಕ್ಷಣ ರಾಮಣ್ಣ ಅವರು ರಾಮಸಮುದ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾಡಳಿತದ ಕೆಲವು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದು, ಇಬ್ಬರು ಕಾರ್ಮಿಕರು ಮತ್ತು ಮನೆಯ ಮಾಲೀಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಚಿನ್ನದ ನಾಣ್ಯ ಯಾವ ಕಾಲಕ್ಕೆ ಸೇರಿದ್ದು ಮುಂತಾದ ಮಾಹಿತಿಯನ್ನು ಪಡೆಯಲು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

Write A Comment