ಮಂಗಳೂರು,ಡಿ.02: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಪಕ್ಷದ ದ.ಕ ಜಿಲ್ಲಾ ಸಮಿತಿ ವತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ನವಾಝ್ ಉಳ್ಳಾಲ್‌ರವರ ಅಧ್ಯಕ್ಷತೆಯಲ್ಲಿ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಕೂಡ್ಲಿಪೇಟೆಯವರು ಆಗಮಿಸಿ ಪಕ್ಷದ ಹಾಗು ಹೋಗುಗಳ ಬಗ್ಗೆ ಹಾಗೂ ಪ್ರಸ್ತುತ ರಾಜಕೀಯ ವ್ಯವಸ್ಥೆಗಳ ಬಗ್ಗೆ ಸವಿವರವಾಗಿ ಮಾತನಾಡಿದರು ಹಾಗೂ ಮುಂದೆ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷವನ್ನು ತಳಮಟ್ಟದಲ್ಲಿ ಬಲಿಷ್ಟ ಗೊಳಿಸುವ ಬಗ್ಗೆ ವಿಸ್ತಾರವಾದ ಚರ್ಚೆನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋದಿ ದೋರಣೆಗಳನ್ನು ಜನತೆಗೆ ತಲುಪಿಸುವಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ನಿರಂತರ ಹೋರಾಟ ಹಾಗೂ ಜನಜಾಗೃತಿ ಸಭೆಗಳನ್ನು ನಡೆಸುವ ಕುರಿತು ತೀರ್ಮಾನಿಸಲಾಯಿತು.
ರಾಜ್ಯ ಸಮಿತಿ ಉಪಾಧ್ಯಕ್ಷರಾದ ಹನೀಫ್ ಖಾನ್ ಕೊಡಾಜೆ, ರಾಜ್ಯ ಕಾರ್ಮಿಕ ಮುಖಂಡರಾದ ಜಲೀಲ್.ಕೆ ಹಾಗೂ ರಾಜ್ಯ ಕಾರ್ಯದರ್ಶಿ ಅಕ್ರಮ್ ಹಸನ್, ರಾಜ್ಯ ಸಮಿತಿ ಸದಸ್ಯರಾದ ಅಲ್ಪೋನ್ಸ್ ಫ್ರಾಂಕೊ, ಜಿಲ್ಲಾ ಉಪಾದ್ಯಕ್ಷರಾದ ಎಂ.ಕೂಸಪ್ಪ ಯೂಸುಫ್ ಆಲಡ್ಕ, ಕೋಶಾಧಿಕಾರಿ ಅಶ್ರಫ್ ಮಂಚಿ, ಹಾಗೂ ಎಲ್ಲಾ ಜಿಲ್ಲಾ ಹಾಗೂ ವಿಧಾನ ಸಭಾ ಸಮಿತಿ ನಾಯಕರು ಉಪಸ್ಥಿತರಿದ್ದರು. ಜಿಲ್ಲಾ ಪ್ರ.ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ ಸ್ವಾಗತಿಸಿದರು, ಅನ್ವರ್ ಸಾದಾತ್ ಬಜತ್ತೂರು ವಂಧಿಸಿದರು.