ಮಂಗಳೂರು,ಡಿ.09: ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಶ್ರೀಮತಿ ಸೋನಿಯಾಗಾಂಧಿಯವರ 68ನೇ ಹುಟ್ಟು ಹಬ್ಬದ ಪ್ರಯುಕ್ತ ಡಾ. ಗಿರಿಧರ ರಾವ್ ಸಂಜೀವಿನಿ ಬಾಯಿ ವಾತ್ಸಲ್ಯಧಾಮ ಕೊಡಿಯಾಲ್ ಬೈಲು ಇಲ್ಲಿನ ವೃದ್ಧಾಶ್ರಮದಲ್ಲಿ ಸುಮಾರು 50 ಕ್ಕೂ ಹೆಚ್ಚು ಜನರಿಗೆ ಮಧ್ಯಾಹ್ನದ ಭೋಜನ ಹಾಗೂ ಸಿಹಿತಿಂಡಿ ವಿತರಿಸಲಾಯಿತು.
ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸೋನಿಯಾಗಾಂಧಿಯವರ ಹುಟ್ಟು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು,
ಈ ಸಂದರ್ಭ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮೆರಿಲ್ ರೇಗೋ, ಉಪಾಧ್ಯಕ್ಷ ರಮಾನಂದ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದಶರ್ಿ ಕಿರಣ್ ಬುಡ್ಲೆಗುತ್ತು, ಕಾಂಗ್ರೆಸ್ ಮುಖಂಡರಾದ ಸಂತೋಷ್ ಶೆಟ್ಟಿ, ಗಿರೀಶ್ ಶೆಟ್ಟಿ, ನಝೀರ್ ಬಜಾಲ್ ಮಂತಾದವರು ಉಪಸ್ಥಿತರಿದ್ದರು.