ಕನ್ನಡ ವಾರ್ತೆಗಳು

ಕಮಲಶಿಲೆ ದುರ್ಗಾಪರಮೇಶ್ವರೀ ಹಣವನ್ನೇ ಯಾಮಾರಿಸಲು ಹೊರಟರೇ ಮೂವರು..?

Pinterest LinkedIn Tumblr

Kamalashile

ಉಡುಪಿ : ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದ ಲೆಕ್ಕಪತ್ರಗಳನ್ನು ಮುಜರಾಯಿ ಇಲಾಖೆಗೆ ನೀಡದೆ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಸುಳ್ಳು ದಾಖಲಾತಿಗಳನ್ನು ಸಲ್ಲಿಸಿ ಶ್ರೀ ದೇವಳದ ಸುಮಾರು 40 ಲ.ರೂ. ಹಣವನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆ ದೇವಳದ ಭಕ್ತ ಹರೀಶ್‌ ಮಹಾಬಲ ಶೆಟ್ಟಿಯವರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಆಧಾರದಲ್ಲಿ ಉಡುಪಿ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ಆದೇಶದಂತೆ ಮೂವರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಛಾತ್ರ, ಅನುವಂಶಿಕ ಮೊಕ್ತೇಸರ ಶ್ರೀನಿವಾಸ ಛಾತ್ರ ಮತ್ತು ಚಂದ್ರಶೇಖರ ಶೆಟ್ಟಿ ಆರೋಪಿಗಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳು ಸುಳ್ಳು ದಾಖಲೆ, ಸುಳ್ಳು ಮಾಹಿತಿ ಮತ್ತು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿ ಅದೇ ನೈಜ ದಾಖಲೆಗಳೆಂದು ಬಿಂಬಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಧಾರ್ಮಿಕ ದತ್ತಿ ಇಲಾಖೆಯೆದುರು ಹಾಜರುಪಡಿಸಿ ದೇವಳದ ಆಡಳಿತ ನಡೆಸುತ್ತಿದ್ದಾರೆ. ಈ ಮೂಲಕ ದೇವಸ್ಥಾನಕ್ಕೆ ಮತ್ತು ಸಾರ್ವಜನಿಕರಿಗೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

 

Write A Comment