ಮಂಗಳೂರು,ಡಿ.12 : ಇಲ್ಲಿನ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಗಣೇಶ್ ವಿ.ಭಟ್ ಗುರುವಾರ ಅಧಿಕಾರ ಸ್ವೀಕರಿಸಿದರು. ಪ್ರೊ. ಟಿ.ಎನ್.ಶ್ಯಾನುಭಾಗ್ ಅವರು ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರಿಸಿದರು. ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಖ್ಯೆಗಿಂತ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಮೌಲ್ಯಾಧಾರಿತ ಹಾಗೂ ಸಂಶೋಧನಾತ್ಮಕ ತಾಂತ್ರಿಕ ಶಿಕ್ಷಣದ ಕನಸು ನನಸಾಗಬೇಕಾದರೆ ಪ್ರತಿಯೊಬ್ಬರಲ್ಲಿಯೂ ಬದ್ಧತೆ ಮುಖ್ಯ. ಬದ್ಧತೆಯಿದ್ದಾಗ ಅಭಿವೃದ್ಧಿ ಸಾಧ್ಯವಿದೆ ಎಂದು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕಾಲೇಜಿನ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಕಾರ್ಯದರ್ಶಿ ಎಂ.ರಂಗನಾಥ ಭಟ್ ಹೇಳಿದರು.
ಕಾಲೇಜಿನ ಸಂಚಾಲಕ ಎಂ.ಪದ್ಮನಾಭ ಪೈ ಮಾತನಾಡಿ ದುಬಾರಿಯಾಗುತ್ತಿರುವ ಶಿಕ್ಷಣ ವ್ಯವಸ್ಥೆಯ ನಡುವೆ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿತವ್ಯಯದಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ಎಂದರು. ನೂತನ ಪ್ರಾಂಶುಪಾಲ ಡಾ.ಗಣೇಶ್ ವಿ. ಭಟ್ ಮಾತನಾಡಿ ಸಂಸ್ಥೆಯ ಆದರ್ಶದ ಪರಂಪರೆ ಮತ್ತು ಧ್ಯೇಯವನ್ನು ಕಾಯ್ದುಕೊಂಡು ಎಲ್ಲರ ಹಭಾಗಿತ್ವದೊಂದಿಗೆ ಬೆಳವಣಿಗೆಯ ಹಾದಿಯಲ್ಲಿ ನಡೆಯಬಯಸುವುದಾಗಿ ಹೇಳಿದರು.
ಆಡಳಿತ ಮಂಡಳಿ ಉಪಾಧ್ಯಕ್ಷ ಎಂ.ಅಣ್ಣಪ್ಪ ಪೈ , ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು. ಕಾಲೇಜಿನ ಆಡಳಿತಾಧಿಕಾರಿ ಎಂ.ಗಣೇಶ್ ಕಾಮತ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.