ಕನ್ನಡ ವಾರ್ತೆಗಳು

ಚೆನೈಗೆ ಮತ್ತೊಂದು ಜೀವಂತ ಹೃದಯ ರವಾನೆ .

Pinterest LinkedIn Tumblr

Live_heart_chenai_a

ಬೆಂಗಳೂರು, ಡಿ.19 : ಸೆ.3ರಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ಜೀವಂತ ಹೃದಯವನ್ನು ಚೆನ್ನೈನ ಪೋರ್ಟಿಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. ಈ ಬಾರಿ ಮಣಿಪಾಲ್ ಆಸ್ಪತ್ರೆಯಿಂದ ಎಚ್‌ಎಎಲ್ ವಿಮಾಣ ನಿಲ್ದಾಣದ ಮೂಲಕ ಚೆನ್ನೈಗೆ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ಇದು ಎರಡನೇಯ ಸಾಹಸ ಬೆಂಗಳೂರಿನಿಂದ ಮತ್ತೊಂದು ಜೀವಂತ ಹೃದಯ ಚೆನ್ನೈಗೆ ಹೊರಟಿದೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟ ಮಗುವಿನ ಹೃದಯವನ್ನು ಚೆನ್ನೈಗೆ ತೆಗೆದುಕೊಂಡು ಹೋಗಲಾಗತ್ತದೆ. ಹೃದಯವನ್ನು ವಿಮಾನ ನಿಲ್ದಾಣಕ್ಕೆ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಬ್ರೇನ್‌ ಡೆಡ್ ಆಗಿ ಮೃತಪಟ್ಟ 2 ವರ್ಷ 10 ತಿಂಗಳ ಮಗುವಿನ ಹೃದಯವನ್ನು ದಾನ ಮಾಡಲು ಪೋಷಕರು ಒಪ್ಪಿಗೆ ನೀಡಿದ್ದಾರೆ. ಚೆನ್ನೈನಲ್ಲಿನ ವ್ಯಕ್ತಿಯೊಬ್ಬರಿಗೆ ಹೃದಯವನ್ನು ಕಸಿ ಮಾಡಲಾಗುತ್ತದೆ. 12.30ಕ್ಕೆ ಜೀವಂತ ಹೃದಯ ಮಣಿಪಾಲ್ ಆಸ್ಪತ್ರೆಯಿಂದ ಹೊರಡಲಿದ್ದು, ಎಚ್‌ಎಎಲ್ ಏರ್‌ಪೋರ್ಟ್‌ ಮೂಲಕ ಚೆನ್ನೈ ತಲುಪಲಿದೆ.

ಕಳೆದ ಬಾರಿ ತರಾತುರಿಯಲ್ಲಿ ಎಲ್ಲಾ ವ್ಯವಸ್ಥೆ ಮಾಡಿಕೊಂಡು ಹೃದಯ ಸಾಗಣೆ ಮಾಡಲಾಗಿತ್ತು. ಈ ಬಾರಿ ಸಂಚಾರಿ ಪೊಲೀಸರಿಗೆ ಮೊದಲೇ ಮಾಹಿತಿ ನೀಡಿದ್ದು, ಜೀರೋ ಟ್ರಾಫಿಕ್ ಮೂಲಕ ಜೀವಂತ ಹೃದಯವಿರುವ ಆಂಬ್ಯುಲೆನ್ಸ್ ಎಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದೆ. ಅಲ್ಲಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತದೆ.

Write A Comment