ಕನ್ನಡ ವಾರ್ತೆಗಳು

ಹೊಸ ವರ್ಷಾಚರಣೆ ಆಚರಣೆಗೆ ಮಾರ್ಗಸೂಚಿ | ಕಾನೂನುಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ : ಪೊಲೀಸ್ ಕಮಿಷನರ್

Pinterest LinkedIn Tumblr

Police_commisnr_hit

ಮಂಗಳೂರು, ಡಿ.28: ಹೊಸ ವರ್ಷಾಚರಣೆಗೆ ಮಂಗಳೂರು ಪೊಲೀಸ್ ಕಮಿಷನರ್ ಆರ್.ಹಿತೇಂದ್ರರವರು ಮಾರ್ಗಸೂಚಿ ರೂಪಿಸಿ ಆದೇಶ ಹೊರಡಿಸಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘಸಂಸ್ಥೆಗಳು ಮತ್ತು ವಿಶೇಷ ಕೂಟಗಳು ಡಿ.31ರ ರಾತ್ರಿ 12:30ರೊಳಗೆ ಮುಕ್ತಾಯಗೊಳಿಸಬೇಕು. ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಲ್ಲಿ ಸರಕಾರ ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚಿನ ಸಮಯ ಕಾರ್ಯಕ್ರಮ ನಡೆಸಬೇಕಾದರೆ ಅಬಕಾರಿ ಇಲಾಖೆಯಿಂದ ಲಿಖಿತ ಅನುಮತಿ ಪಡೆಯಬೇಕು. ಡಿ.31ರಂದು ಸಂಜೆ 4ರೊಳಗೆ ಪೊಲೀಸ್ ಆಯುಕ್ತರ ಕಚೇರಿಯಿಂದ ಅನುಮತಿ ಪಡೆಯಬೇಕು. ಅನುಮತಿ ಪಡೆಯದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಹೊಸ ವರ್ಷಾಚರಣೆಯನ್ನು ಒಳಾವರಣದಲ್ಲೇ ನಡೆಸಬೇಕು. ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು. ಯಾವುದೇ ಅಹಿತಕರ ಘಟನೆಗಳಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಿದಲ್ಲಿ ಸಂಬಂಧಪಟ್ಟ ಇಲಾಖೆಗಳಿಂದ ಪರವಾನಿಗೆ ಪಡೆದು ಕಾರ್ಯಕ್ರಮಗಳನ್ನು ರಾತ್ರಿ 12:30ರ ಒಳಗಡೆ ಮುಗಿಸಬೇಕು. ವಿದ್ಯಾರ್ಥಿಗಳು ಹಾಗೂ ಯುವಕರು ರಾತ್ರಿ ಹೊಸ ವರ್ಷಾಚರಣೆ ನೆಪದಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸ ಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಬೆತ್ತಲೆ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಶುಭಕೋರುವ ನೆಪದಲ್ಲಿ ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಶುಭಕೋರುವ ನೆಪದಲ್ಲಿ ಕಿರಿಕಿರಿ ಮಾಡಬಾರದು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ವಹಿಸಲು ಕ್ರಮ ಕೈಗೊಳ್ಳಲಾಗಿದೆ.

ವಾಹನಗಳನ್ನು ವೀಲಿಂಗ್ ಮತ್ತು ಡ್ರಾಗ್ ರೇಸ್ ಮಾಡುವುದನ್ನು, ಬೊಬ್ಬೆ ಹಾಕು ವುದು ಹಾಗೂ ಅತೀ ವೇಗವಾಗಿ ವಾಹನಗಳನ್ನು ಚಲಾಯಿಸುವುದು ಮತ್ತು ಕರ್ಕಶ ಶಬ್ದ ಮಾಡುವುದನ್ನು ನಿಷೇಧಿಸಲಾಗಿದೆ.ಇವೆಲ್ಲವನ್ನು ತಡೆಗಟ್ಟಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಇವರು ನಗರದ ಎಲ್ಲ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತಾರೆ ಎಂದವರು ತಿಳಿಸಿದ್ದಾರೆ.

ಸಮುದ್ರ ಕಿನಾರೆಗಳಲ್ಲಿ ಮದ್ಯಪಾನ ಮಾಡುವುದು, ಅಶ್ಲೀಲವಾಗಿ ವರ್ತಿಸುವುದು, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಬೆತ್ತಲೆ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಸಾರ್ವಜನಿಕರ ಮನೆಗಳ ಮುಂದೆ ವಿದ್ಯಾರ್ಥಿಗಳ ಹಾಸ್ಟೆಲ್, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಕಾಂಪೌಂಡ್‌ನೊಳಗಡೆ ಶುಭಾಶಯ ಕೋರುವ ನೆಪದಲ್ಲಿ ಅನಧಿಕೃತವಾಗಿ ಯಾವುದೇ ವ್ಯಕ್ತಿ ಅಥವಾ ಗುಂಪು ಹೋಗಿ ಕಿರಿಕಿರಿ/ಅಸಭ್ಯವಾಗಿ ವರ್ತನೆ ಮಾಡುವುದನ್ನು ಮತ್ತು ಬಲವಂತವಾಗಿ ಶುಭಾಶಯ ಕೋರುವುದನ್ನು ನಿಷೇಧಿಸಲಾಗಿದೆ. ರಸ್ತೆಯಲ್ಲಿ ಮದ್ಯಪಾನ ಮಾಡುವುದು ಮತ್ತು ಬಾಟಲಿ ಎಸೆಯುವುದನ್ನು ನಿಷೇಧಿಸಿದೆ.

ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ನೆಪದಲ್ಲಿ ಪಟಾಕಿ ಸಿಡಿ ಮದ್ದುಗಳನ್ನು ಸಿಡಿಸುವುದನ್ನು ನಿಷೇಧಿ ಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅರ್ಜಿದಾರರನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾರ್ಯ ಕ್ರಮಗಳನ್ನು ಆಯೋಜಿಸುವವರು ಸಂಬಂಧಪಟ್ಟ ಇಲಾಖೆಗಳಿಂದ ಪಡೆದ ಪರವಾನಿಗೆಯಲ್ಲಿ ನೀಡಿದ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿ ಸಬೇಕು. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ಆಯೋಜಿಸು ವವರು ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿ ಶಾಮಕ ಉಪಕರಣ ಗಳು, ತುರ್ತು ಚಿಕಿತ್ಸಾ ವಾಹನ ಹಾಗೂ ಇತರೇ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

Write A Comment