ಮಂಗಳೂರು : ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕು. ಆದರೆ ಈ ಅವಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ವಹಿಸುತ್ತಾರೆ. 2018ರವರೆಗೆ ಸಿ.ಎಂ ಸಿದ್ಧರಾಮಯ್ಯರೇ ನಮ್ಮ ರಾಜ್ಯದ ಮುಖ್ಯಮಂತ್ರಿಯಾಗಿರುತ್ತಾರೆ. ಸಿ.ಎಂ ಸಿದ್ಧರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ರಾಜ್ಯದ ಜನತೆಗಾಗಿ ಉತ್ತಮ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. 2018ರಲ್ಲಿ ರಾಜ್ಯಕ್ಕೆ ದಲಿತರೊರ್ವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಸಮಾಜಕಲ್ಯಾಣ ಇಲಾಖಾ ಸಚಿವ ಹೆಚ್.ಆಂಜನೇಯ ಭವಿಷ್ಯ ನುಡಿದರು.
ಮಂಗಳುರಿನ ( ದ.ಕನ್ನಡ) ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಲಿತರೊರ್ವರು ರಾಜ್ಯದಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ದೀನ ದಲಿತರ ಏಳಿಗೆಗೆ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಮನವಿಯನ್ನು ಹೈಕಮಾಂಡ್‌ಗೆ ಸಲ್ಲಿಸುವುದಾಗಿ ಅವರು ಹೇಳಿದರು.
ಚನಾವಣೆಗೂ ಮುನ್ನ ಮೋದಿ ಸರ್ಕಾರ ನೀಡಿದ ಭರವಸೆಗಳೆಲ್ಲ ಸುಳ್ಳಾಗಿದೆ. ಜನರು ಮತ್ತೆ ಕಾಂಗ್ರೆಸ್‍ನತ್ತ ಒಲವು ತೋರಿಸಲಿದ್ದಾರೆ. ರಾಜ್ಯದಲ್ಲಿ ಎಸ್‍ಸಿಎಸ್ಟಿ ಕಲ್ಯಾಣಕ್ಕಾಗಿ 15,834 ಕೋಟಿ ರೂ. ಮೀಸಲಿಡಲಾಗಿದ್ದು, ಅನುದಾನ ಬಳಸದಿದ್ದಲ್ಲಿ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಮುಜರಾಯಿ ಇಲಾಖೆಯಲ್ಲಿ ದಲಿತ ಅರ್ಚಕಿ ನೇಮಕ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವರು, ದಲಿತ ಅರ್ಚಕಿಯರ ನೇಮಕ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.ರಾಜ್ಯದಲ್ಲಿ ಎಸ್‍ಸಿಎಸ್ಟಿ ಕಲ್ಯಾಣಕ್ಕಾಗಿ 15,834 ಕೋಟಿ ರೂ. ಮೀಸಲಿಡಲಾಗಿದ್ದು, ಅನುದಾನ ಬಳಸದಿದ್ದಲ್ಲಿ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಎಂಬ ಕುರಿಯನ್ನು ಬಲಿಕೊಡುತ್ತೇವೆ ಎಂಬ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಬಿಜೆಪಿಯ ಹರಕೆಯ ಕುರಿ ಎಂದು ಹೆಚ್.ಆಂಜನೇಯ ತಿರುಗೇಟು ನೀಡಿದ್ದಾರೆ. ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಈಶ್ವರಪ್ಪ ಬಿಜೆಪಿಯ ಹರಕೆಯ ಕುರಿ ಎಂದು ಲೇವಡಿ ಮಾಡಿದ್ದಾರೆ. ಜನರು ಭ್ರಮನಿರಸನಕ್ಕೊಳಗಾಗಿ ಬಿಜೆಪಿಗೆ ಮತ ನೀಡಿದ್ದಾರೆ. ಮೋದಿ ಸರ್ಕಾರದ ಭರವಸೆಗಳೆಲ್ಲ ಸುಳ್ಳಾಗಿದೆ. ಜನರು ಮತ್ತೆ ಕಾಂಗ್ರೆಸ್‍ನತ್ತ ಒಲವು ತೋರಿಸಲಿದ್ದಾರೆ ಅಂತಾ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಶಾಸಕರುಗಳಾದ ಶಕುಂತಳಾ ಶೆಟ್ಟಿ, ಜೆ.ಆರ್ ಲೋಬೋ, ಮೊಯ್ದೀನ್ ಬಾವಾ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.