ಕನ್ನಡ ವಾರ್ತೆಗಳು

“ಸದ್ಗುಣಗಳನ್ನು ಕಲಿಸುವ ಶಿಕ್ಷಣ ಅಗತ್ಯ: ಕೈಲಾಸಮೂರ್ತಿ”

Pinterest LinkedIn Tumblr

Annual_Day_report_1

ಕುಂಬಳೆ ,ಜ.12 : “ವಿದ್ಯೆ ಸಂಸ್ಕಾರವನ್ನು ಕೊಡುತ್ತದೆ. ವಿನಯವನ್ನು ಬೆಳೆಸುತ್ತದೆ. ಉತ್ತಮ ಸಮಾಜದ ನಿರ್ಮಾಣಕ್ಕೆ ಪೂರಕವಾದ ಸದ್ಗುಣಗಳನ್ನು ಕಲಿಸುವ ಇಂತಹ ಶಿಕ್ಷಣ ಇಂದಿನ ಸಮಾಜಕ್ಕೆ ಅತೀ ಅಗತ್ಯ. ಸಮಾಜದ ಉಳಿವಿಗೆ ಇದು ಪೂರಕ. ಮುಜುಂಗಾವಿನ ಪರಿಸರದಲ್ಲಿ ವಿದ್ಯಾರ್ಥಿಯ ಬೆಳವಣಿಗೆಗೆ ಅಪಾರ ಸಾಧ್ಯತೆಗಳಿವೆ. ಎಂದು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂರ್ತಿ.ಕೆ ಅಭಿಪ್ರಾಯಪಟ್ಟರು. ಅವರು ದಿನಾಂಕ 10.01.2014 ಶನಿವಾರ ಮುಜುಂಗಾವಿನಲ್ಲಿ ನಡೆದ ಶ್ರೀ ಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

Annual_Day_report_2

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಮಿತಿಯ ಅಧ್ಯಕ್ಷ ಮದನಗುಳಿ ರಾಮಚಂದ್ರ ಭಟ್ ವಹಿಸಿದ್ದರು. ಅಭ್ಯಾಗತರಾಗಿ ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಅಶ್ವಿನಿ ನಾಣಿತ್ತಿಲು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ಥಳೀಯ ಯೋಜನಾಧಿಕಾರಿ ಶ್ರೀಮತಿ ಸಂಧ್ಯಾ. ವಿ.ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್ ಭಾಗವಹಿಸಿದರು. ಶಾಲಾ ಸಮಿತಿಯ ಜತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಭಾರತೀ ವಿದ್ಯಾಪೀಠದ ವರದಿಯನ್ನು ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಭೆ-ಮಾರ್ಗ ವಾಚಿಸಿದರು.

Annual_Day_report_4 Annual_Day_report_3

ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳ ‘ಬೆಳಕು’ ಮತ್ತು ‘ಜ್ಞಾನದೀಪ್ತಿ’ ಹಸ್ತಪ್ರತಿಗಳನ್ನು ಬಿಡುಗಡೆಗೊಳಿಸಲಾಯಿತು. ಶಾಲಾ ವಿದ್ಯಾರ್ಥಿಗಳಾದ ವಿದ್ಯಾಶ್ರೀ ಸ್ವಾಗತಿಸಿ, ಶ್ಯಾಮ ಭಟ್ ದರ್ಭೆ-ಮಾರ್ಗ ವಂದಿಸಿದರು. ವಿದ್ಯಾರ್ಥಿ ವಿಕ್ರಮ್ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನೃತ್ಯ ವೈವಿಧ್ಯ ಜರಗಿತು.

Write A Comment