ಕನ್ನಡ ವಾರ್ತೆಗಳು

ವದಂತಿಗಳಿಗೆ ಕಿವಿಕೊಡದೆ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕಾಪಾಡಿ – ಶಾಂತಿಭಂಗಕ್ಕೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ: ಸಚಿವ ರೈ ಎಚ್ಚರಿಕೆ

Pinterest LinkedIn Tumblr

ramnatha_rai_pressmeet_1

ಮಂಗಳೂರು, ಜ.20: ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕಾಪಾಡಲು ಎಲ್ಲಾ ಜನರ ಸಹಕಾರ ಅಗತ್ಯವಿದೆ. ವದಂತಿಗಳಿಗೆ ಜನತೆ ಕಿವಿಗೊಡಬಾರದು. ಶಾಂತಿ ಭಂಗ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಎಚ್ಚರಿಸಿದ್ದಾರೆ.

ಸೋಮವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತೀಯ ಸೂಕ್ಷ್ಮ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡುವ ಕಾರ್ಯ ಮಾಡುತ್ತಿರುವುದು ಖೇದಕರ. ಮತೀಯ ವಾದವನ್ನು ಮುಂದಿಟ್ಟುಕೊಂಡು ಕಾರ್ಯಕ್ರಮ ಆಯೋಜಿಸುವುದೇ ತಪ್ಪು ಎಂದ ಅವರು, ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದು ಖಂಡನೀಯ ಎಂದರು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬಹಳಷ್ಟು ಶ್ರಮಪಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ramnatha_rai_pressmeet_2

ದೇವರ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ ಕದಡುವುದು, ಒಂದು ಕೋಮಿನ ಜನರನ್ನು ಇನ್ನೊಂದು ಕೋಮಿನ ಜನರ ವಿರುದ್ಧ ಎತ್ತಿಕಟ್ಟುವುದು, ಮತೀಯವಾದವನ್ನು ಮುಂದಿಟ್ಟು ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ಜನರನ್ನು ಪ್ರಚೋದಿಸುವುದು ಸರಿ ಯಲ್ಲ. ಇಂತಹ ವ್ಯಕ್ತಿಗಳು ಹಾಗೂ ಸಂಘ ಟನೆಗಳ ಬಗ್ಗೆ ಜನ ಜಾಗೃತರಾಗಿ ಅವರನ್ನು ಬಹಿಷ್ಕರಿಸಬೇಕಾಗಿದೆ ಎಂದ ಸಚಿವ ರೈ, ಸಾರ್ವಜನಿಕ ಸಭೆ ಸಮಾರಂಭಗಳನ್ನು ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಇಂತಹ ಸಮಾರಂಭದ ಮೂಲಕ ಕೋಮು ದ್ವೇಷ ಕೆರಳಿಸುವ ಭಾಷಣ ಮಾಡಬಾರದು. ಈ ರೀತಿ ಜನರನ್ನು ಕೆರಳಿಸುವವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದವರು ಎಚ್ಚರಿಸಿದರು.

ಬೆಳ್ತಂಗಡಿ- ಕರಾಯ ಘಟನೆಯ ಬಗ್ಗೆ ಜಿಲ್ಲಾ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಕಾರ್ಯಾ ಚರಣೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ತಡೆ ಒಡ್ಡುವವರ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳಲು ಅಧಿಕಾರಿಗಳಿಗೆ ಸೂಚಿಸ ಲಾಗಿದೆ. ಅಲ್ಲದೇ ಅಮಾಯಕರಿಗೆ ತೊಂದರೆ ಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಈ ನಡುವೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ಹರಡುತ್ತಿರುವ ವದಂತಿ ಗಳಿಗೆ ಜನತೆ ಕಿವಿಗೊಡಬಾರದು ಎಂದು ರಮಾನಾಥ ರೈ, ಜಿಲ್ಲೆಯ ಜನತೆಯಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.

ramnatha_rai_pressmeet_3

ಶಿರಾಡಿ ಘಾಟ್ ರಸ್ತೆ ಕಾಮಗಾರಿ ಆರು ತಿಂಗಳಲ್ಲಿ ಪೂರ್ಣ:ಶಿರಾಡಿ ಘಾಟಿಯ ರಸ್ತೆ ಕಾಮಗಾರಿಗೆ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್‌ರ ಪ್ರಯತ್ನ ದಿಂದ ಹಣ ಬಿಡು ಗಡೆಯಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ನಿಗದಿ ಪಡಿಸಿದಂತೆ ಆರಂಭಗೊಂಡಿದೆ. ಆದರೆ ಕೆಲವರು ಕಾಮಗಾರಿಯ ಬಗ್ಗೆ ಟೀಕೆ ಮಾಡುತ್ತಿದ್ದರೆ. ಹಾಲಿ ಕ್ಷೇತ್ರದ ಸಂಸದರಾಗಿದ್ದವರು ಘಾಟಿ ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಗಮನಹರಿಸದೆ ಟೀಕಿಸುವುದರಲ್ಲಿ ಮಗ್ನರಾಗಿದ್ದಾರೆ. ಆದರೆ ನಿಗದಿಯಂತೆ ಆರು ತಿಂಗಳಲ್ಲಿ ಮೊದಲ ಹಂತದ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಬಗ್ಗೆ ಸಂದೇಹ ಪಡಬೇಕಾಗಿಲ್ಲ ಎಂದು ರಮಾನಾಥ ರೈ ತಿಳಿಸಿದರು.

ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯದ ತೀರ್ಮಾನ ಅಂತಿಮವಲ್ಲ : ಕಸ್ತೂರಿ ರಂಗನ್ ವರದಿ ಜಾರಿಯಾಗಬೇಕಾ ದರೆ ಕರ್ನಾಟಕ ರಾಜ್ಯದ ವರದಿ ಅಂತಿಮ ವಲ್ಲ. ಪಶ್ಚಿಮ ಘಟ್ಟ ವ್ಯಾಪ್ತಿಯ ಎಲ್ಲಾ ರಾಜ್ಯಗಳ ವರದಿ ಬಂದ ನಂತರ ಅಂತಿಮ ತೀರ್ಮಾನವಾಗಲಿದೆ. ಜೈವಿಕ ಸೂಕ್ಷ್ಮ ಪ್ರದೇಶಗಳಿಗೆ ಗಾಡ್ಗಿಳ್ ವರದಿ ಯಿಂದ ಹೆಚ್ಚು ಹಾನಿಯಾಗುವ ಸಾಧ್ಯತೆ ಇರುವುದರಿಂದ ಕಸ್ತೂರಿ ರಂಗನ್ ವರದಿಯ ಬಗ್ಗೆ ಚಿಂತನೆ ನಡೆಸಿದೆ. ಈ ವರದಿಯಿಂದ ಜೀವ ವೈವಿಧ್ಯ ಹಾಗೂ ಪಶ್ಚಿಮ ಘಟ್ಟದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ವರದಿ ಗಾಗಿ ಎಂಬುದರ ಬಗ್ಗೆ ರಾಜ್ಯ ಸರಕಾರ ಸದನ ಸಮಿತಿ ರಚಿಸಿದೆ. ಸದನ ಸಮಿತಿ ಸಾರ್ವ ಜನಿಕ ಅಭಿಪ್ರಾಯವನ್ನು ಸಂಗ್ರಹಿಸಿ ಸಾಧಕ- ಬಾಧಕಗಳ ಬಗ್ಗೆ ವರದಿ ನೀಡಲಿದೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಆರ್.ಕೆ.ಪ್ರಥ್ವಿರಾಜ್, ಪ್ರಕಾಶ್ ಶೆಟ್ಟಿ ತುಂಬೆ, ಕವಿತಾ ಸನಿಲ್, ಸಂತೋಷ್ ಶೆಟ್ಟಿ,ನಜೀರ್ ಬಜಾಲ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥನ್ ರೈ ಉಪಸ್ಥಿತರಿದ್ದರು.

Write A Comment