ಕನ್ನಡ ವಾರ್ತೆಗಳು

ನಂದಿತಾ ಸಾವು ಪ್ರಕರಣ : ಸಿಬಿಐ ತನಿಖೆ ಅರ್ಜಿ ವಜಾ

Pinterest LinkedIn Tumblr

nanditha

ಬೆಂಗಳೂರು,ಜ.24 : ಭಾರೀ ವಿವಾದಕ್ಕೆ ಕಾರಣವಾಗಿದ್ದ ತೀರ್ಥಹಳ್ಳಿಯ ನಂದಿತಾ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಿಐಡಿ ತನಿಖೆಯಲ್ಲಿ ತಮಗೆ ನಂಬಿಕೆ ಇಲ್ಲ. ಆದ್ದರಿಂದ ಪ್ರಕರಣದ ಸಂಪೂರ್ಣ ತನಿಖೆ ಸಿಬಿಐಗೆ ವಹಿಸಬೇಕೆಂದು ನಂದಿತಾಳ ತಂದೆ ಟಿ.ಜಿ.ಕೃಷ್ಣಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾ.ಕೆ.ಎಲ್.ಮಂಜುನಾಥ್ ಅವರ ಏಕ ಸದಸ್ಯ ಪೀಠ, ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿದೆ.

ವಿಚಾರಣೆಗೆ ಹಾಜರಾದ ರಾಜ್ಯ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಸಿಐಡಿ ಪೊಲೀಸರು ಈಗಾಗಲೇ ತನಿಖೆ ಪೂರ್ಣಗೊಳಿಸಿದ್ದಾರೆ. ಮುಂದಿನ ಎರಡು ವಾರದಲ್ಲಿ ಅಂತಿಮ ತನಿಖಾ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಸಿಬಿಐ ತನಿಖೆಗೆ ವಹಿಸಲು ಇದು ಸೂಕ್ತ ಪ್ರಕರಣವಲ್ಲ. ಹೀಗಾಗಿ ಅರ್ಜಿ ವಜಾ ಮಾಡಬೇಕು’ ಎಂದು ಕೋರಿದರು. ಇದನ್ನು ಪರಿಗಣಿಸಿದ ಏಕಸದಸ್ಯ ಪೀಠ, ಸಿಐಡಿ ಪ್ರಕರಣದ ತನಿಖೆ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಅವಶ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.

ತೀರ್ಥಹಳ್ಳಿಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ನಂದಿತಾ ಅ.2014ರಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಳು. ನಂದಿತಾಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಲಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆಗೆ ಆದೇಶಿಸಿತ್ತು.

Write A Comment