ಕನ್ನಡ ವಾರ್ತೆಗಳು

ಕರಾಯ ಕಲ್ಲು ತೂರಾಟ ಪ್ರಕರಣ : ಆರೋಪಿಗಳ ಶೀಘ್ರ ಬಂಧನಕ್ಕೆ ಅಗ್ರಹಿಸಿ ಹಿಂದೂ ಮುಖಂಡರಿಂದ ಎಸ್ ಪಿ ಗೆ ಮನವಿ.

Pinterest LinkedIn Tumblr

hindu_sangatane_photo

ಮಂಗಳೂರು,ಜ.29 : ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ವಿರಾಟ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ ಮುಗಿದು ವಾಪಾಸಾಗುತ್ತಿದ್ದ ವೇಳೆ ಉಪ್ಪಿನಂಗಡಿ ಕರಾಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಿ ಅಶಾಂತಿಗೆ ಕಾರಣರಾದ ಆರೋಪಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದ.ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪ್‌ಸಿಂಹ ನಾಯಕ್, ವಿಶ್ವ ಹಿಂದೂ ಪರಿಷತ್ ಪ್ರಾಂತ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವರಾದ ಶ್ರೀ ನಾಗರಾಜ್ ಶೆಟ್ಟಿ, ಭಾ.ಜ.ಪ. ಹಿಂದುಳಿದ ಮೋರ್ಚಾದ ಉಪಾಧ್ಯಕ್ಷರಾದ ನಿತಿನ್ ಕುಮಾರ್, ಬಜರಂಗದಳ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ವಿರಾಟ್ ಹಿಂದೂ ಹೃದಯ ಸಂಗಮದ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ನ್ಯಾಯವಾದಿ ಕೆ. ಹರೀಶ್ ಪೂಂಜ ಶ್ರೀ ಗುರುಚರಣ್ ಮುಂತಾದವರ ನಿಯೋಗ ಗುರುವಾರ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಸ್.ಡಿ.ಶರಣಪ್ಪ ಅವರಿಗೆ ಮನವಿ ನೀಡಿದರು.

ಘಟನೆಗೆ ಕಾರಣರಾದವರ ಮೇಲೆ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಪ್ರಕರಣದಲ್ಲಿ ಭಾಗಿಯಾದ ಕೆಲವು ವಾಹನಗಳನ್ನು ಈಗಾಗಲೇ ಪತ್ತೆ ಹಚ್ಚಲಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಬೇಕು ಮತ್ತು ಅಮಾಯಕರ ಮೇಲೆ ಹಾಕಿರುವ ಕೇಸುಗಳನ್ನು ಹಿಂಪಡೆಯಬೇಕು ಎಂದು ಪೊಲೀಸ್ ಅಧೀಕ್ಷಕರನ್ನು ನಿಯೋಗ ಒತ್ತಾಯಿಸಿದ್ದು, ಪೊಲೀಸ್ ಅಧೀಕ್ಷಕರು ಧನಾತ್ಮಕವಾಗಿ ಸ್ಪಂದಿಸಿರುತ್ತಾರೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆಯನ್ನು ನೀಡಿರುತ್ತಾರೆ.

Write A Comment