ಕನ್ನಡ ವಾರ್ತೆಗಳು

ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆ ಫೆಬ್ರವರಿ 6 ರಂದು-ಎ.ಬಿ.ಇಬ್ರಾಹಿಂ

Pinterest LinkedIn Tumblr

Kadata_yajna_dc_2

ಮಂಗಳೂರು ಫೆ. 4 : ಸರ್ಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವವರು ಕಾಯ್ದೆ  94 ಸಿ ಯಡಿ ಯಲ್ಲಿ ವಾಸ ಸ್ಥಳದ ಸಕ್ರಮೀಕರಣಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡುವ ಸಮಾರಂಭ ಫೆ.6 ರಂದು ನಡೆಯಲಿದೆಯೆಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿರುತ್ತಾರೆ.

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ನ ಲೊರೆಟ್ಟೋ ಹಾಲ್ ನಲ್ಲಿ ಅಂದು ಸಂಜೆ 5.30 ಕ್ಕೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ರವರು ಸುಮಾರು 200  ಫಲಾನುಭವಿಗಳಿಗೆ ವಾಸಸ್ಥಳ ಸಕ್ರಮೀಕರಣ ಹಕ್ಕು ಪತ್ರ ಗಳನ್ನು ವಿತರಿಸಲಿರುವರು. ಈ ಸಮಾರಂಭದಲ್ಲಿ ಉಸ್ತುವಾರಿ ಸಚಿವ ಬಿ.ರಮನಾಥ ರೈ, ಆರೋಗ್ಯ ಸಚಿವ ಯು.ಟಿ.ಖಾದರ್, ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ,ಸೇರಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Write A Comment