ಕನ್ನಡ ವಾರ್ತೆಗಳು

ಫೆ.7: ಬಾಲ ನ್ಯಾಯ ಕಾಯ್ದೆ ಮತ್ತು ಮಕ್ಕಳ ರಕ್ಷಣೆ ಕುರಿತು ಕಾರ್ಯಾಗಾರ

Pinterest LinkedIn Tumblr

Moodbidr_new_court_2

ಮಂಗಳೂರು,ಫೆ.06  : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಬಾಲನ್ಯಾಯ ಮಂಡಳಿ, ವಕೀಲರ ಸಂಘ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬಾಲ ನ್ಯಾಯ ಕಾಯ್ದೆ ಮತ್ತು ಮಕ್ಕಳ ರಕ್ಷಣೆ ಕುರಿತು ಫೆ.7 ರಂದು ಒಂದು ದಿನದ ಕಾರ್ಯಾಗಾರ ನಡೆಯಲಿದೆ ಎಂದು ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಧೀಶೆ ಉಮಾ ಎಂ.ಜಿ ಹೇಳಿದ್ದಾರೆ.

Moodbidr_new_court_1

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನ್ಯಾಯಾಧೀಶರು, ಮಂಗಳೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ರಾಜ್ಯ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ.ಹೆಚ್ ವಘೇಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದರ ಜೊತೆಗೆ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾದ ಹುಲುವಾಡಿ ಬಿ. ರಮೇಶ್, ಅಬ್ದುಲ್ ನಜೀರ್, ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ್ ಜಿ ನಿಜಗಣ್ಣನವರ್, ವಕೀಲರ ಪರಿಷತ್ ಅಧ್ಯಕ್ಷ ಪಿ.ಪಿ ಹೆಗ್ಡೆ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಅಲ್ಲದೆ ಮೂಡಬಿದ್ರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಲೂಕು ನ್ಯಾಯಾಲಯ ಸಮುಚ್ಚಯದ ಉದ್ಘಾಟನೆ ಫೆ. 8ರಂದು ನಡೆಯಲಿದೆ.ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಹಾಗೂ ಸಚಿವ ಅಭಯಚಂದ್ರ ಜೈನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಎ.ಜಿ ಧರ್ಮರಾಜ್, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಚೆಂಗಪ್ಪ, ಎನ್.ಎಸ್ ಪಾಟೀಲ್,ಬಿ ಗಣೇಶ್, ಉಪಸ್ಥಿತರಿದ್ದರು.

Write A Comment