ಕನ್ನಡ ವಾರ್ತೆಗಳು

ಮಾ.4-5; ಸಾಲಿಗ್ರಾಮದಲ್ಲಿ 10ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ

Pinterest LinkedIn Tumblr

halambi

ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಆಶ್ರಯದಲ್ಲಿ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್ 4 ಮತ್ತು 5 ರಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ವಠಾರದಲ್ಲಿ ಜರುಗಲಿದೆ.

ಸಮ್ಮೇಳನದ ಪೂರ್ವ ಸಿದ್ಧತೆಗಾಗಿ ಶನಿವಾರ ಸಂಜೆ ಕೋಟ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ, ಉದ್ಯಮಿ ಆನಂದ ಸಿ.ಕುಂದರ್ ಅಧ್ಯಕ್ಷತೆಯಲ್ಲಿ ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸಭೆ ಜರುಗಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ 100ರ ಸಂಭ್ರಮದಲ್ಲಿದ್ದು, ಈ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ದಷ್ಟಿಯಲ್ಲಿ ಸಾಲಿಗ್ರಾಮದಲ್ಲಿ ಕನ್ನಡ ನಾಡು ನುಡಿಯ ಹಬ್ಬ ಸಂಘಟಿಸಲಾಗಿದೆ ಎಂದರು.

ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸಾಧು ಪಿ., ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ,ಸಾಹಿತಿ ಅಂಬಾತನಯ ಮುದ್ರಾಡಿ, ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರೋ.ಉಪೇಂದ್ರ ಸೋಮಯಾಜಿ, ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್,ಡಾ.ಕೆ.ಎಸ್ ಕಾರಂತ ಉಪಸ್ಥಿತರಿದ್ದು, ಸಲಹೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಸ್ವಾಗತ ಸಮಿತಿ, ವಿವಿಧ ಉಪ ಸಮಿತಿ ರಚಿಸಲಾಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ರಂಗಪ್ಪಯ್ಯ ಹೊಳ್ಳ ಸ್ವಾಗತಿಸಿದರು. ಕಾರ್ಯದರ್ಶಿ ನಾರಾಯಣ ಮಡಿ ವಂದಿಸಿದರು.

ಸಮ್ಮೇಳನಾಧ್ಯಕ್ಷರಾಗಿ ಪುಂಡಲೀಕ ಹಾಲಂಬಿ: ಉಡುಪಿ ಜಿಲ್ಲಾ ೧೦ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕನ್ನಡ ಸಾಹಿತ್ಯ ಪರಿಷತ್‌ನ ಕೇಂದ್ರಾಧ್ಯಕ್ಷರಾದ ಪುಂಡಲೀಕ ಹಾಲಂಬಿ ಅವರನ್ನು ಆಯ್ಕೆ ಮಡಲಾಗಿದೆ. ಮೂಲತಃ ಕುಂದಾಪುರ ತಾಲೂಕಿನ ಹಾಲಾಡಿಯವರಾದ ಇವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Write A Comment