ಕನ್ನಡ ವಾರ್ತೆಗಳು

ದ.ಕ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಸಮಸ್ಯೆಗಳ ಬಗ್ಗೆ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಮಂತ್ರಿಗಳೊಂದಿಗೆ ಚರ್ಚೆ

Pinterest LinkedIn Tumblr

mcc_prblm_photo_1

ಮಂಗಳೂರು ಫೆ.10: ದ.ಕ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ವಿಪರೀತ ಉಲ್ಫಣಗೊಂಡಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆಗಳ ಅನುಷ್ಟಾನವಿಲ್ಲದೆ ಜಿಲ್ಲಾ ಪಂಚಾಯತ್‌ನಿಂದ ಯಾವುದೇ ರೀತಿಯ ತುರ್ತು ಕುಡಿಯುವ ನೀರಿನ ಯೋಜನೆಗೆ ಅನುದಾನವಿಲ್ಲದೆ ಸಮಸ್ಯೆಯಾಗಿದ್ದು, ಜೊತೆಗೆ ದ.ಕ ಜಿಲ್ಲೆಯಲ್ಲಿ ಅಂತರ್ಜಲ ಕುಸಿತದಿಂದ ಕುಡಿಯುವ ನೀರಿನ ಯೋಜನೆ ವಿಫಲವಾಗುತ್ತಿದ್ದು,

ಶಾಶ್ವತ ಕುಡಿಯುವ ನೀರಿನ ಯೋಜನೆಗಳನ್ನು ದ.ಕ ಜಿಲ್ಲೆಗೆ ಅನುಷ್ಟಾನಿಸುವ ನಿಟ್ಟಿನಲ್ಲಿ ಮತ್ತು ಇತ್ತೀಚೆಗಿನ ದಿನಗಳಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ಮನೆ ಮತ್ತು ಕಟ್ಟಡ ಪರವಾನಿಗೆ ನೀಡಲು ಆಗಿರುವ ತೊಂದರೆ ಹಾಗೂ ಜನ ಸಾಮಾನ್ಯರಿಗೆ ನಮೂನೆ 9 ಮತ್ತು 11 ಎಂಬ ಹೊಸ ನಿಯಮಾವಳಿಯಿಂದ ಜಿಲ್ಲೆಯ ಜನರಿಗೆ ಮನೆ ನಿರ್ಮಾಣಕ್ಕೆ ಸಾಕಷ್ಟು ತೊಂದರೆಯಾಗಿರುವುದನ್ನು ರಾಜ್ಯದ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಮಂತ್ರಿ ಹೆಚ್.ಕೆ ಪಾಟೀಲ್ ರವರಿಗೆ ಮನವರಿಕೆ ಮಾಡಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಮಾಜಿ ಸಚಿವರು ವಿಧಾನ ಪರಿಷತ್ ಸದಸ್ಯರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರ ನೇತ್ರತ್ವದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಮತ್ತು ಜಿಲ್ಲಾ ಪಂಚಾಯತ್‌ನ ಉಪಾಧ್ಯಕ್ಷ ಸತೀಶ್ ಕುಂಪಲ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ರವರು ಭೇಟಿ ಮಾಡಿ ಸಚಿವರಿಗೆ ಜಿಲ್ಲೆಯ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದರು.

ಸಮಗ್ರ ಕುಡಿಯುವ ನೀರಿನ ಯೋಜನೆ ಹಾಗೂ ನಮೂನೆ 9 ಮತ್ತು 11 ಸಮಸ್ಯೆಗಳ ಬಗ್ಗೆ ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ಕಟ್ಟಡ ಪರವಾನಿಗೆ ಬಗ್ಗೆ ಮತ್ತು ಇನ್ನಿತರ ಸಮಸ್ಯೆಗಳ ಬಗ್ಗೆ ತಕ್ಷಣವೇ ಜನ ಪ್ರತಿನಿಧಿಗಳ ಸಭೆಯನ್ನು ಕರೆದು ಪರಿಹರಿಸುವುದಾಗಿ ಭರವಸೆ ನೀಡಿದರು

Write A Comment