ಮಂಗಳೂರು,ಫೆ.18 : ಆಟೋ ರಿಕ್ಷಾದ ಮೀಟರ್ ದರವನ್ನು 20 ರೂಪಾಯಿಂದ 25ಕ್ಕೆ ಏರಿಸಬೇಕೆಂದು ಒತ್ತಾಯಿಸಿ ಬುಧವಾರ ರಿಕ್ಷಾ ಚಾಲಕರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು
ರಿಕ್ಷಾ ಚಾಲಕರು ಜಿಲ್ಲಾಧಿಕಾರಿಯವರು ಮಾಡಿದಂತಹ ದರ ಪರಿಷ್ಕರಣೆ ವೇಳೆ ತಮ್ಮ ಹಿತಾಸಕ್ತಿಯನ್ನು ಬಲಿಕೊಟ್ಟಿದ್ದಾರೆ ಎಂದು ಆರೋಪಿಸಿ, ಪೆಟ್ರೋಲ್ ಬೆಲೆಗಳಲ್ಲಿ ಗಣನೀಯ ಇಳಿಕೆಯಾಗಿದ್ದರೂ ಬಿಡಿ ಭಾಗ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆಯಾಗಿಲ್ಲ. ಆಟೋ ರಿಕ್ಷಾ ನಿರ್ವಹಣಾ ವೆಚ್ಚದಲ್ಲೂ ಏರಿಕೆಯಾಗಿದೆ. ಇದರಿಂದ ರಿಕ್ಷಾದ ಮೀಟರ್ ದರ ಇಳಿಸಿದ್ದು ಸರಿಯಲ್ಲ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.

