ಕನ್ನಡ ವಾರ್ತೆಗಳು

ಮಾರ್ಚ್ 4ರಿಂದ 9ರವರೆಗೆ ಮಂಗಳಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ | ಮಾರ್ಚ್ 10ರಿಂ ವಾರ್ಷಿಕ ಜಾತ್ರೋತ್ಸವ

Pinterest LinkedIn Tumblr

magala_devi_temple

ಮಂಗಳೂರು,ಫೆ.24: ಮಂಗಳೂರಿನ ಇತಿಹಾಸ ಪ್ರಸಿದ್ಧ ಮಂಗಳಾ ದೇವಿ ದೇವಸ್ಥಾನದ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮಾರ್ಚ್ 4ರಿಂದ 9ರವರೆಗೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಬಳಿಕ ವಾರ್ಷಿಕ ಜಾತ್ರಾ ಮಹೋತ್ಸವ ಮಾ.10ರಿಂದ 15ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಪಿ.ರಮಾನಾಥ ಹೆಗ್ಡೆ ತಿಳಿಸಿದ್ದಾರೆ.

ಮಂಗಳವಾರ ಕ್ಷೇತ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಾರ್ಚ್ 4ರಂದು ಬುಧವಾರ ನೀಲೇಶ್ವರದ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾರಂಭದ ವಿವಿಧಾನಗಳು ನಡೆಯಲಿದೆ. ಪ್ರತಿದಿನ ಬೆಳಗ್ಗಿನಿಂದ ಸಂಜೆಯವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮಾರ್ಚ್ 9ರಂದು ಶ್ರೀ ದೇವಿಗೆ ಬಹ್ರ್ಮಕಲಶಾಭಿಶೇಕ ನಡೆಯಲಿದೆ ಸಂಜೆ 6 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪೇಜಾವರಶ್ರೀಗಳು ಆಶೀರ್ವಚನ ನೀಡಲಿದ್ದಾರೆ ಎಂದು ಹೇಳಿದರು.

ಮಾರ್ಚ್ 10ರಿಂದ ಮಂಗಳಾದೇವಿ ದೇವಸ್ಥಾನದಲ್ಲಿ ವರ್ಷಾವ ಜಾತ್ರೆ ಆರಂಭಗೊಂಡು ಮಾರ್ಚ್ 15ರಂದು ಸಭಾಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕರಾದ ಸುಧಾಕರ ರಾವ್ ಪೇಜಾವರ ತಿಳಿಸಿದ್ದಾರೆ.

ದೇವಸ್ಥಾನದ ಆನುವಂಶಿಕ ಟ್ರಸ್ಟಿಗಳಾದ ರಘುರಾಮ ಉಪಾಧ್ಯಾಯ, ವೆಂಕಟ್ರಮಣ ಐತಾಳ, ಪದ್ಮನಾಭ ಐತಾಳ, ಕಾರ್ಯಕ್ರಮ ಸಂಘಟನಾ ಸಮಿತಿಯ ಸದಸ್ಯರಾದ ಮೋಹನ್ ಮೆಂಡನ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Write A Comment