ಕನ್ನಡ ವಾರ್ತೆಗಳು

ಅಂಧ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್ ನೀಡಲು ಸರಕಾರ ನಿರ್ಧಾರ :ಸಚಿವೆ ಉಮಾಶ್ರೀ

Pinterest LinkedIn Tumblr

umashree_congs_photo_1

ಮಂಗಳೂರು,ಫೆ.27: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಈಗಾಗಲೇ ಶೇ.90ರಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅವರು ಗುರುವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಯೋಜನೆಗಳನ್ನು ಜನತೆಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು. ಲ್ಯಾಪ್‌ಟಾಪ್, ಸಹಾಯಧನ: ಅಂಧ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್ ನೀಡಲು ಸರಕಾರ ನಿರ್ಧರಿಸಿದೆ ಎಂದು ಹೇಳಿದ ಅವರು, ಪ್ರಾರಂಭಿಕ ಹಂತದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಿತರಣೆ ನೆರವೇರಿಸಲಾಗುವುದು ಎಂದರು.

ಅಂಧ ಮಹಿಳೆಯರಿಗೆ ಪೂರಕವಾದ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಮದುವೆಯಾದ ಅಂಧ ಮಹಿಳೆಯರು ಹೆರಿಗೆ ಸಂದರ್ಭ ಪ್ರತಿ ತಿಂಗಳು 2 ಸಾವಿರ ರೂ. ಸಹಾಯಧನ ಪಡೆಯಲಿದ್ದಾರೆ ಎಂದು ಅವರು ತಿಳಿಸಿದರು.

umashree_congs_photo_2

ಭೂಸ್ವಾಧೀನ ವಿರುದ್ಧ ಪ್ರತಿಭಟನೆ: ಪಕ್ಷದ ಮುಖಂಡರ ಸೂಚನೆ ಬಂದ ಬಳಿಕ ರಾಜ್ಯಾದ್ಯಂತ ಕೇಂದ್ರ ಸರಕಾರದ ಭೂಸ್ವಾಧೀನ ಕಾಯಿದೆ ಸುಗ್ರೀವಾಜ್ಞೆ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಮಮತಾ ಗಟ್ಟಿ, ಕೃಪಾ ಅಮರ್ ಆಳ್ವ, ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.

Write A Comment