ಕನ್ನಡ ವಾರ್ತೆಗಳು

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀ ಪಿ.ವಿ ದೇಸಾಯಿ ಇವರಿಗೆ ವಿದಾಯ ಸಮಾರಂಭ.

Pinterest LinkedIn Tumblr

CPO_send_offe_photo

ಮಂಗಳೂರು,ಮಾರ್ಚ್ .02: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತರಾದ ಶ್ರೀ ಪಿ.ವಿ ದೇಸಾಯಿ ಇವರಿಗೆ ಬೀಳ್ಕೊಡುಗೆ ಸಮಾರಂಭವು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.  ಸಭಾಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರಿಮತಿ ಆಶಾ ತಿಮ್ಮಪ್ಪ ಗೌಡರವರು ದೇಸಾಯಿಯವರನ್ನು ಸನ್ಮಾನಿಸಿ ಮಾತನಾಡಿದ ಅವರು ಭ್ರಷ್ಟಾಚಾರ ರಹಿತವಾಗಿ ಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಿದಾಗ ದೇವರ ಅನುಗ್ರಹ ದೊರೆಯುತ್ತದೆ. ಹಾಗೂ ಸಮಾಜದಲ್ಲಿಯೂ ಉತ್ತಮ ಗೌರವ ದೊರೆಯುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಉಪಾದ್ಯಕ್ಷರಾದ ಶ್ರೀ ಸತೀಶ್ ಕುಂಪಲರವರು ಶುಭ ಹಾರೈಸಿದರು. ವೇದಿಕೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶ್ರೀ ಎನ್.ಆರ್ ಉಮೇಶ್, ಯೋಜನಾ ನಿರ್ದೇಶಕ ಶ್ರೀ ಟಿ.ಎಸ್ ಲೋಕೇಶ್, ಪ್ರಭಾರ ಮುಖ್ಯ ಯೋಜನಾಧಿಕಾರಿ ಶ್ರೀಮತಿ ಸಂಧ್ಯಾ, ಸಹಾಯಕ ಕಾರ್ಯದರ್ಶಿ ಶ್ರೀ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು. ಉಪಕಾರ್ಯದರ್ಶಿ ಶ್ರೀ ಎನ್.ಆರ್ ಉಮೇಶ್, ಸ್ವಾಗತಿಸಿ ಸಹಾಯಕ ಸಾಂಖ್ಯಿಕ ಅಧಿಕಾರಿ ಮಹೇಶ್ ಅಂಬೆಕಲ್ ಕಾರ್ಯಕ್ರಮ ನಿರೂಪಿಸಿದರು.

Write A Comment