ಮಂಗಳೂರು : ಜಾತಿ- ಧರ್ಮಗಳ ಭೇದವಿಲ್ಲದೆ ಎಲ್ಲರೂ ಒಟ್ಟಾಗಿ ಭಾಗವಹಿಸುವ ಕ್ಷೇತ್ರ ಕ್ರೀಡಾಕ್ಷೇತ್ರ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಜೀವನದಲ್ಲಿ ಶ್ರೇಯಸ್ಸುಗಳಿಸಬೇಕು ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ, ಜಿ.ಆರ್.ಎಜುಕೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್ ಹೇಳಿದರು.
ಅವರು ಕರಾವಳಿ ಕಾಲೇಜುಗಳ ಸಮೂಹದ ವತಿಯಿಂದ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತರ್ ಕಾಲೇಜು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೃಢ ಸಂಕಲ್ಪ ಮತ್ತು ಸತತ ಪ್ರಯತ್ನದಿಂದ ಬದುಕಿನಲ್ಲಿ ಯಸಸ್ಸುಗಳಿಸಲು ಸಾದ್ಯ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡಾ ಚಟುವಟಿಕೆ ಮನುಷ್ಯ ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿಗಳು ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾ ಸ್ಪೂರ್ತಿಯಿಂದ ಅಟೋಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಐವನ್ ಕರೆ ನೀಡಿದರು.
ಕರಾವಳಿ ಕಾಲೇಜುಗಳ ಸಮೂಹದ ನಿರ್ದೇಶಕಿ ಲತಾ.ಜಿ.ರಾವ್, ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು, ಶಿಕ್ಷಕರು ಉಪಸ್ಥಿತರಿದ್ದರು. ಉಪನ್ಯಾಸಕಿ ದೀಪಿಕಾ ಸ್ವಾಗತಿಸಿದರು. ಶೃತಿ ಶೆಟ್ಟಿ ನಿರೂಪಿಸಿದರು. ಎಸ್.ಸಲ್ಮಾ ವಂದಿಸಿದರು.