ಕನ್ನಡ ವಾರ್ತೆಗಳು

ಸಾಮಾಜಿಕ ಜಾಲತಾಣಕ್ಕೆ ಕಾಲಿಟ್ಟ ರಾಜ್ಯ ಮಾನವ ಹಕ್ಕು ಆಯೋಗ

Pinterest LinkedIn Tumblr

human_right_facebook

ಬೆಂಗಳೂರು, ಮಾ.09  : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಗಳನ್ನು ತೆರೆದಿದ್ದು, ಸಾರ್ವಜನಿಕರು ಆಯೋಗವನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಬಹುದಾಗಿದೆ. ಆಯೋಗದ ಕಚೇರಿಯಲ್ಲಿ ಜನರ ಸಹಾಯಕ್ಕಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಮೀರಾ ಸಕ್ಸೇನಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಇನ್ನುಮುಂದೆ ಸಾರ್ವಜನಿಕರು ಟ್ವಿಟರ್ ಮತ್ತು ಫೇಸ್‌ಬುಕ್‌ ಮೂಲಕ ಆಯೋಗವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಖಾತೆಯ ಮೂಲಕ ಜನರು ದೂರುಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕರು ಕೇವಲ ದೂರು ನೀಡಲು ಮಾತ್ರ ಈ ಖಾತೆಗಳನ್ನು ಉಪಯೋಗಿಸಬಾರದು. ಆಯೋಗಕ್ಕೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡುವುದಕ್ಕೂ ಆಯೋಗವನ್ನು ಈ ಮೂಲಕ ಸಂಪರ್ಕಿಸಬಹುದು ಎಂದು ಮೀರಾ ಸಕ್ಸೇನಾ ಹೇಳಿದರು.

ಸಹಾಯವಾಣಿ ಆರಂಭ : ಆಯೋಗದ ಕಚೇರಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಸಹಾಯವಾಣಿಗೆ ಜನರು ಉಚಿತವಾಗಿ ಕರೆ ಮಾಡಬಹುದು ಎಂದರು. ಸಹಾಯವಾಣಿ ಸಂಖ್ಯೆಗಳು : 1800-425-23333.

ಫೇಸ್‌ಬುಕ್‌ನಲ್ಲಿ ಅವಹೇಳನ ದೂರು ದಾಖಲು : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮ ಹಾಗೂ ಅಲ್ಲಾಹುವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ನಿತ್ಯಾನಂದ ನಾಯ್ಕ್ ಎಂಬ ಯುವಕನ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯಲ್ಲಿ ಇಸ್ಲಾಂ ಮತ್ತು ಅಲ್ಲಾಹುವಿನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಯನ್ನು ಅಪ್ ಲೋಡ್ ಮಾಡಲಾಗಿದೆ.

Write A Comment