ಮಂಗಳೂರು,ಮಾರ್ಚ್,14 : ನಗರ ಹೊರವಲಯದ ಜೆಪ್ಪಿನಮೊಗರಿನಲ್ಲಿ ಶನಿವಾರ ಬೆಳಿಗ್ಗೆ ಟಿಪ್ಪರ್ ಲಾರಿಯೊಂದು ಟೆಂಪೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ, ಟೆಂಪೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ನತದೃಷ್ಟ ಟೆಂಪೋರಿಕ್ಷಾ ಮಂಗಳೂರಿನ ಹಳೆಯ ಬಂದರಿನಿಂದ ಮೀನು ತುಂಬಿಕೊಂಡು ಉಪ್ಪಳಕ್ಕೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಜಪ್ಪಿನಮೊಗರು ತಲಪುತ್ತಿದ್ದಂತೆ ಚತುಷ್ಪಥ ಕಾಮಗಾರಿಯಲ್ಲಿ ತೊಡಗಿಕೊಂಡಿರುವ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಅದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟೆಂಪೋರಿಕ್ಷಾ ಬುಡಮೇಲಾಗಿ ಬಿದ್ದಿದ್ದು, ಚಾಲಕ ಮೊಯ್ದೀನ್ (40) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.
ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಕೆ ನಡೆಸುತ್ತಿದ್ದಾರೆ