ಮೈಸೂರು,ಮಾರ್ಚ್.16 : ನೂರಾರು ಜನರ ಎದುರೇ ನಟ ನವೀನ್ ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೈಸೂರಿನಲ್ಲಿರುವ ಬೆಳವಾಡಿಯಲ್ಲಿ ಈ ಘಟನೆ ನಡೆದಿದ್ದು, ಹಳೇ ದ್ವೇಷದ ಹಿನ್ನಲೆಯಲ್ಲಿ ನವೀನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
“ಹಾಯ್ ಕೃಷ್ಣ’ ಚಿತ್ರದ ನಾಯಕ ನವೀನ್ ಅವರು ಚಿತ್ರ ನಿರ್ಮಾಣದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಅಲ್ಲದೇ ನವೀನ್ ಗೆ ಹಣಕಾಸಿನ ವಿಚಾರದಲ್ಲಿ ಸ್ನೇಹಿತನೊಂದಿಗೆ ವೈಷಮ್ಯವಿತ್ತು. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಲು ಯತ್ನಿಸಿದ್ದ ನವೀನ್, ಕೊಲೆ ಯತ್ನದ ಆರೋಪಿಯಾಗಿದ್ದರು.