ಕನ್ನಡ ವಾರ್ತೆಗಳು

ಪಾಲಿಕೆ ವತಿಯಿಂದ ಬೀದಿ ಬದಿ ವ್ಯಾಪಾರಿ ಅಂಗಡಿಗಳ ತೆರವು ಕಾರ್ಯಾಚರಣೆ

Pinterest LinkedIn Tumblr

gudangady_demlis_1

ಮಂಗಳೂರು,ಮಾರ್ಚ್.17  :  ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮಂಗಳವಾರ ಸ್ಟೇಟ್ ಬ್ಯಾಂಕ್‌ನಿಂದ ಲೇಡಿ ಗೋಶನ್ ಆಸ್ಪತ್ರೆವರೆಗಿನ ಫುಟ್‌ಪಾತ್‌ನಲ್ಲಿದ್ದ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ಇದು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದ್ದು ,ಸಿಐಟಿಯು ನೇತೃತ್ವದಲ್ಲಿ ವ್ಯಾಪಾರಿಗಳು ಪಾಲಿಕೆಯ ಅಧಿಕಾರಿಗಳನ್ನು ಭೇಟಿ ಮಾಡಿ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಮನವಿ ಮಾಡಿದರು.

ಬೆಳಗ್ಗೆ ನಡೆದ ತೆರವು ಕಾರ್ಯಾಚರಣೆಯಲ್ಲಿ ಫಾಸ್ಟ್ ಫುಡ್, ತರಕಾರಿ, ಹಣ್ಣು ಹಂಪಲು ಮುಂತಾದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಸಣ್ಣ ಅಂಗಡಿಗಳು, ವಾಹನಗಳನ್ನು ಪರವಾನಗಿ ಇಲ್ಲದಿರುವ ಹಾಗೂ ಇತರ ಕಾರಣಗಳಿಗೆ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದರು. ಇದಲ್ಲದೆ ಕೆಲವು ಹಣ್ಣು ಹಂಪಲು, ತರಕಾರಿ ಹಾಗೂ ತಂಪು ಪಾನೀಯಗಳ ಅಂಗಡಿಗಳೂ ಇದ್ದವು.

gudangady_demlis_2 gudangady_demlis_3 gudangady_demlis_4

ಜಂಕ್ಷನ್‌ನಿಂದ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಪರವಾನಗಿ ಇಲ್ಲದೆ ಅನಧಿಕೃತವಾಗಿ ಅಂಗಡಿಗಳನ್ನು ಇಟ್ಟುಕೊಂಡಿರುವವರಿಗೆ ಮಾ.16ರಂದು ತೆರವುಗೊಳಿಸುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಆದರೆ ಮಾ.17ರಂದು ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಕಂದಾಯ ಇಲಾಖೆ ಉಪ ಆಯುಕ್ತ ರಾಜು ಮೊಗವೀರ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸಹಾಯಕ ಆಯುಕ್ತ ವಿಜಯ್, ಆರೋಗ್ಯಾಧಿಕಾರಿ ಭರತ್ ಕುಮಾರ್,ಅಧಿಕಾರಿಗಳಾದ ಪೂವಪ್ಪ, ಯಶೋಧರ್,ಕರುಣಾಕರ್ ಮತ್ತಿತರರು ಪಾಲ್ಗೊಂಡಿದ್ದರು.

ಪರ್ಯಾಯ ವ್ಯವಸ್ಥೆಗೆ ಆಗ್ರಹ :  ಬೀದಿಬದಿ ವ್ಯಾಪಾರಿಗಳ ಸಂಘದ ಸದಸ್ಯರು ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಗೂಡಂಗಡಿಗಳನ್ನು ತೆರವುಗೊಳಿಸಿರುವುದು ಸರಿಯಲ್ಲ. ಅದನ್ನು ನಿಲ್ಲಿಸಬೇಕು ಎಂದು ಪಾಲಿಕೆ ಆಯುಕ್ತರಲ್ಲಿ ಮನವಿ ಮಾಡಿದರು. ಪಾಲಿಕೆ ಎದುರು ಸೇರಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸುನಿಲ್ ಕುಮಾರ್ ಬಜಾಲ್, ಪಾಲಿಕೆಯ ನಿಲುವನ್ನು ಪ್ರತಿಭಟಿಸದಿದ್ದಲ್ಲಿ ನಾವು ಬೀದಿಪಾಲಾಗಬೇಕಾಗುತ್ತದೆ ಎಂದು ಹೇಳಿದರು.

Write A Comment