ಕನ್ನಡ ವಾರ್ತೆಗಳು

ಮುಡಿಪು ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ, ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಎಸ್‌ಎಫ್‌ಐ ಒತ್ತಾಯ

Pinterest LinkedIn Tumblr

ಕುಂದಾಪುರ : ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳದಂತೆ ಅಡ್ಡಿಪಡಿಸಿ ವಿದ್ಯಾರ್ಥಿಗಳಿಗೆ ಬೆದರಿಕೆ ಒಡ್ಡಿ ದಾಂದಲೆ ನಡೆಸಿದ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್‌ಎಫ್‌ಐ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ.

SFI_Protest_Mudipu issue

ಆರೋಪಿಗಳನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ಕಳುಹಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಕೋಮುವಾದಿ ಶಕ್ತಿಗಳ ರಾಜಕೀಯ ಕಾರಣಗಳಿಗಾಗಿ ಕೋಮುಗಲಭೆಯನ್ನು ನಡೆಸಲು ಪ್ರಯತ್ನಿಸುತ್ತಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ಗುರಿಮಾಡಿ ಗಲಭೆ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಎಸ್‌ಎಫ್‌ಐ ಕುಂದಾಪುರ ತಾಲೂಕು ಕಾರ್ಯದರ್ಶಿ ಶ್ರೀಕಾಂತ್ ಹೆಮ್ಮಾಡಿ ತಿಳಿಸಿದ್ದಾರೆ.

ಎಸ್‌ಎಫ್‌ಐ ನಿಯೋಗದಲ್ಲಿ ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಅಕ್ಷಯ ವಡೇರಹೋಬಳಿ, ಆಲ್ಡ್ರೀನ್ ಡಿಸೋಜ, ಆದಿತ್ಯ, ವಿಕ್ಯಾತ್, ತ್ರಿವರ್ಣ, ದೀಪಕ್, ಮನೋಹರ್, ಅನೀಲ್, ಕಾರ್ತಿಕ್ ಉಪಸ್ಥಿತರಿದ್ದರು.

Write A Comment