ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ದುಬೈಗೆ ಸಾಗಿಸಲು ಯತ್ನಿಸುತ್ತಿದ್ದ 6,47,395 ಲಕ್ಷ ರೂ. ಮೌಲ್ಯದ (37100 ಯುಎಇ ದಿರ‌್ಹಾಮ್) ನಗದನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಕೊಡಗು ಮೂಲದ ಜಬ್ಬಾರ್ ಕತ್ಲೆಕ್ಕಾಡ್ ಇಸ್ಮಾಯಿಲ್ (32) ಬಂಧಿತ ಆರೋಪಿ. ಈತ ಗುರುವಾರ ಬೆಳಗ್ಗೆ ಮಂಗಳೂರಿನಿಂದ ದುಬೈಗೆ ತೆರಳಲು ಸಿದ್ಧವಾಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಈ ಕರೆನ್ಸಿಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಕಸ್ಟಮ್ಸ್ ಅಧಿಕಾರಿಗಳು ದಾಳಿ ನಡೆಸಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ತನಿಖೆ ನಡೆಯ್ತುತಿದೆ.