ಕನ್ನಡ ವಾರ್ತೆಗಳು

ಮಂಗಳೂರು ವಿವಿಯಲ್ಲಿ ಅಂತರ್ ರಾಜ್ಯ ಮಟ್ಟದ ಕ್ರೀಡಾ ನೀತಿ ಜಾರಿಗೆ : ಪ್ರೊ. ಕೆ. ಭೈರಪ್ಪ

Pinterest LinkedIn Tumblr

VV_prof_kebairappa

ಮಂಗಳೂರು, ಮಾ.20 : ರಾಜ್ಯದಲ್ಲಿ ಪ್ರಥಮ ಬಾರಿಗೆ ಮಂಗಳೂರು ವಿಶ್ವವಿದ್ಯಾಲಯ ಪ್ರತ್ಯೇಕವಾದ ಕ್ರೀಡಾ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯ, ಅಂತಾರಾಜ್ಯ ಮಟ್ಟದ 14 ಮಂದಿ ತಜ್ಞರ ಸಮಿತಿ ನೇತೃತ್ವದಲ್ಲಿ ಕ್ರೀಡಾ ನಿಯಮಗಳನ್ನು ತಯಾರಿಸಲಾಗುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ವಿವಿಯಿಂದ ಕ್ರೀಡೆಗೆ ಹೆಚ್ಚಿನ ಆದ್ಯತೆ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದ್ದು, 400 ಮೀಟರ್ ಟ್ರಾಕ್ ಹಾಗೂ ವ್ಯವಸ್ಥಿತ ಕ್ರೀಡಾಂಗಣದ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಕೊಣಾಜೆ ಕ್ಯಾಂಪಸ್‌ನಲ್ಲಿ ಮಾಡಲಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಇದರ ಉದ್ಘಾಟನೆ ನೆರವೇರಲಿದೆ ಎಂದರು. ಮಂಗಳೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕಿಶೋರ್‌ಕುಮಾರ್ ಸಿ.ಕೆ. ಮಾತನಾಡಿ, ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗಕ್ಕೆ ದೊರೆತಿರುವ 2.40 ಕೋಟಿ ರೂ. ಅನುದಾನದಿಂದ ಕ್ರೀಡಾ ತಂಡಗಳಿಗೆ ತರಬೇತಿ ಶಿಬಿರಕ್ಕೆ ಅನುಕೂಲವಾದ ಫಿಟ್ನೆಸ್ ಸೆಂಟರ್, ಫಿಸಿಯೊ ಹಾಗೂ ಸೈಕಾಲಜಿ ಲ್ಯಾಬ್ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ಹಂತದಲ್ಲಿ ಯುಜಿಸಿಯಿಂದ 25 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಈ ಸಂದರ್ಭ ಹೇಳಿದರು. ಈ ಅನುದಾನದಲ್ಲಿ ಒಳಾಂಗಣ ಕ್ರೀಡಾಂಗಣ, ಹೊರಾಂಗಣ ಕ್ರೀಡಾಂಗಣ ಸಿದ್ಧಪಡಿಸುವ ಗುರಿ ಹೊಂದ ಲಾಗಿದೆ. ಮಾತ್ರವಲ್ಲದೆ ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪೂರಕವಾದ ಈಜುಕೊಳ ಸೇರಿದಂತೆ ಕ್ರೀಡೆಗೆ ಅಗತ್ಯ ವಾದ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಡಾ.ಕಿಶೋರ್ ಕುಮಾರ್ ಹೇಳಿದರು.

ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸಂಧ್ಯಾ ಕಾಲೇಜು: 
ಮುಂದಿನ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸಂಧ್ಯಾ ಕಾಲೇಜು, ಕೊಣಾಜೆ ವಿಶ್ವ ಮಂಗಳ ಶಾಲೆಯಲ್ಲಿ ಬಿಎ ಮತ್ತು ಬಿಕಾಂ ತರಗತಿ, ಫ್ರೆಂಚ್ ಮತ್ತು ಜರ್ಮನಿ ಭಾಷೆ ಅಧ್ಯಯನ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದು ಕುಲಪತಿ ಪ್ರೊ.ಕೆ.ಭೈರಪ್ಪ ತಿಳಿಸಿದ್ದಾರೆ.

Write A Comment