ಪುತ್ತೂರು,ಮಾರ್ಚ್.27: ಮೊರ್ಗಾಲ್ನಲ್ಲಿ ಒಮ್ನಿ ಕಾರೊಂದು ಗುದ್ದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಶಾಲಾ ಬಾಲಕ, ಹಮೀದ್ ಎಂಬವರ ಪುತ್ರ ಅಫ್ತಾದ್(14) ಮಂಗಳೂರಿನ ಆಸ್ಪತ್ರೆಯಲ್ಲಿ ಗುರುವಾರ ಸಾಪನ್ನಪ್ಪಿದ್ದಾನೆ. ಬಾಲಕ ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾರು ರಭಸದಿಂದ ಗುದ್ದಿತ್ತು. ಆತನನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿತ್ತು.
ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನಲ್ಲಿ ನಡೆಸಲಾಯಿತು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.