ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2014ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿಯ ವರದಿಗಾರ ಬಾಲಕೃಷ್ಣ ಶಿಬಾರ್ಲ ಆಯ್ಕೆಯಾಗಿದ್ದಾರೆ.
2014ರ ಜುಲೈ 31 ರಂದು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ನಕ್ಸಲ್, ಪೊಲೀಸ್ ಮಧ್ಯೆ ನಲುಗಿದವರು” ಅವರ ಈ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಎಪ್ರಿಲ್ 7ರಂದು ಮಂಗಳವಾರ ಬೆಳಗ್ಗೆ 10.45ಕ್ಕೆ ಮಂಗಳೂರು ಪತ್ರಿಕಾ ಭವನದ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.
ಪ್ರಶಸ್ತಿಯು ರೂ.10,001/ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ಜಗನ್ನಾಥ ಶೆಟ್ಟಿ ಬಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.