ತುಮಕೂರು,ಎ.01 : ಸಿದ್ದಗಂಗಾ ಮಠದ ಪೀಠಾಧ್ಯಕ್ಷ, ಜಗದ್ಗುರು ಶಿವಕುಮಾರ ಸ್ವಾಮಿ ಅವರಿಗೆ ಇಂದು 108ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಮಠದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಹುಟ್ಟು ಹಬ್ಬವನ್ನು ಹಳೆ ಮಠದ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಶ್ರೀಗಳ ಭಕ್ತ ಸಮೂಹ ಶ್ರೀಗಳಿಗೆ ಪಾದಪೂಜೆ ನೆರವೇರಿಸಿ ದನ್ಯರಾಜರು. ಈ ವೇಳೆ ಶ್ರೀಗಳಿಂದ ಆಶೀರ್ವಾದ ಪಡೆಯಲು ಮುಂದಾಗಿದ್ದ ಜನರ ನಡುವೆ ನೂಕು ನುಗ್ಗಲು ಸಂಭವಿಸಿತ್ತು.
ಇನ್ನು ಪಾದಪೂಜೆ ಕಾರ್ಯಕ್ರಮದಲ್ಲಿ ರಾಜ್ಯದ ವಿಧಾನಸಭಾ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ, ಸಹಕಾರ ಸಚಿವ ಹೆಚ್.ಎಸ್.ಮಹಾದೇವ ಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ಮುದ್ದಹನುಮೇಗೌಡ, ಮಾಜಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಸೇರಿದಂತೆ ಅನೇಕ ಗಣ್ಯರು ಬಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದರು
