ಕನ್ನಡ ವಾರ್ತೆಗಳು

ಬಂಟರ ಸಂಘ, ಅದ್ದೂರಿಯ ಬಿಸುಪರ್ಬ, ಬಂಟರ ದಿನಾಚರಣೆ

Pinterest LinkedIn Tumblr

mumbai_news_photo_1a

ವರದಿ : ಈಶ್ವರ ಎಂ. ಐಲ್
ಚಿತ್ರ,: ದಿನೇಶ್ ಕುಲಾಲ್

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಬಿಸುಪರ್ಬ ಹಾಗೂ ಬಂಟರ ದಿನಾಚರಣೆಯು ಎ. 14 ರಂದು ಜರಗಿತು. ಪೂರ್ವಾಹ್ನ 9.30ರಿಂದ ಸಂಘದ ಆವರಣದಲ್ಲಿರುವ ಶ್ರೀ ಮಹಾವಿಷ್ಣು ಮಂದಿರದಲ್ಲಿ ವಿಶೇಷ ಪೂಜೆ ನೆರವೇರಿದ ಬಳಿಕ ಗಣಪತಿ ಸ್ತುತಿಯೊಂದಿಗೆ ಪೂಜಾನೃತ್ಯ ಜರಗಿತು. ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಜ್ಯೋತಿ ಬೆಳಗಿಸಿ ವಿಶ್ವಬಂಟರ ದಿನಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಬಂಟರ ಸಂಘ ಬಳ್ಳಾರಿ ಅಧ್ಯಕ್ಷ ಸುರೇಶ್‌ಶೆಟ್ಟಿ ಗುರ್ಮೆ, ಗೌರವ ಅತಿಥಿಯಾಗಿ ಬಂಟರ ಸಂಘ ಪಡುಬಿದ್ರಿ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಉಪಸ್ಥಿತರಿದ್ದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ ನೇತೃತ್ವದಲ್ಲಿ ಜರಗಿದ ಸಮಾರಂಭದಲ್ಲಿ ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ಶೆಟ್ಟಿ, ಸಂಘದ ಉಪಾಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉಳ್ತೂರು ಮೋಹನದಾಸ್‌ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‌ಕುಮಾರ್‌ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ಎಸ್‌. ಶೆಟ್ಟಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿವೇಕ್‌ವಿ. ಶೆಟ್ಟಿ ಉಪಸ್ಥಿತರಿದ್ದರು.

mumbai_news_photo_2a mumbai_news_photo_3a mumbai_news_photo_4a mumbai_news_photo_5a

ಸಮಾರಂಭದಲ್ಲಿ ಶ್ರೀ ಮಹಾವಿಷ್ಣು ಕೃಪಾ ಬಂಟ ಯಕ್ಷಕಲಾ ವೇದಿಕೆಯು ಸಂಘದ ಮೂಲಕ ಪ್ರತಿವರ್ಷ ಅತ್ಯುತ್ತಮ ಯಕ್ಷಗಾನ ಕಲಾವಿದ ಸಾಧಕರಿಗೆ ನೀಡುವ ಕಣಂಜಾರು ಆನಂದ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಯನ್ನು ಈ ವರ್ಷ ಯಕ್ಷಗಾನ ಕಲಾವಿದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಹಾಗೂ ಶ್ರೀಮತಿ ಪ್ರೇಮಾ ನಾರಾಯಣ ರೈ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದೆ, ಲೇಖಕಿ ದಯಾಮಣಿ ಶೆಟ್ಟಿ ಅವರಿಗೆ ಗಣ್ಯರು ಪ್ರದಾನಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಬಂಟರ ಸಂಘ ಬಳ್ಳಾರಿ ಅಧ್ಯಕ್ಷ ಸುರೇಶ್‌ಶೆಟ್ಟಿ ಗುರ್ಮೆ, ಗೌರವ ಅತಿಥಿ ಬಂಟರ ಸಂಘ ಪಡುಬಿದ್ರಿ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಉಪಸ್ಥಿತರಿದ್ದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ ನೇತೃತ್ವದಲ್ಲಿ ಜರಗಿದ ಸಮಾರಂಭದಲ್ಲಿ ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ಶೆಟ್ಟಿ, ಸಂಘದ ಉಪಾಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉಳ್ತೂರು ಮೋಹನದಾಸ್‌ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‌ಕುಮಾರ್‌ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ಎಸ್‌. ಶೆಟ್ಟಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿವೇಕ್‌ವಿ. ಶೆಟ್ಟಿ ಉಪಸ್ಥಿತರಿದ್ದರು.

ಹಾಸ್ಯ ಕವಿಗೋಷ್ಠಿಯಲ್ಲಿ ಬಂಟ ಸಮುದಾಯದ ಕವಿಗಳು ಬಾಗವಹಿಸಿದ್ದು ಡಾ. ಸುನಿತಾ ಶೆಟ್ಟಿಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ಥಳೀಯ ಸಮಿತಿಗಳ ವತಿಯಿಂದ ವಿವಿಧ ಸಾಂಸ್ಕೃತಿಕ ವೈಭವವು ನಡೆಯಿತು.

mumbai_news_photo_6a mumbai_news_photo_7a mumbai_news_photo_8 mumbai_news_photo_9a mumbai_news_photo_10

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿಯವರು, ಸಂಘದ ಮುಂದಿನ ಯೋಜನೆಗಳಾದ ಬ್ಯಾಂಕ್, ಆರ್ಥಿಕವಾಗಿ ಹಿಂದುಳಿದ ಸಮಾಜದ ಯುವತಿಯರ ವಿವಾಹಕ್ಕಾಗಿ ’ಕಂಕಣ ಭಾಗ್ಯ’ ಆರೋಗ್ಯ ಭಾಗ್ಯ, ಇತ್ಯಾದಿಗಳಿಗೆ ಸಮಾಜ ಬಾಂಧವರ ಸಹಕಾರವಿರಲಿ ಎಂದರು. ದಾನಿ ಸುಧೀರ್ ಶೆಟ್ಟಿ, ಮುಖ್ಯ ಅತಿಥಿ ಬಂಟರ ಯಾನೆ ನಾಡವರ ಸಂಘ ಮಂಗಳೂರಿನ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಗೌರವ ಅತಿಥಿಯಾಗಿ ಉದ್ಯಮಿ ಪ್ರಕಾಶ್ ಶೆಟ್ಟಿ, ಪೋಲೀಸ್ ಅಧಿಕಾರಿ ಹೇಮಂತ್ ನಾಗ್ ರಾಲೆ ಉಪಸ್ಥಿತರಿದ್ದು ಮಾತನಾಡಿದರು.

ಖ್ಯಾತ ಉದ್ಯಮಿ ಶಶಿಕಿರಣ್ ಮತ್ತು ಆರತಿ ಶಶಿಕಿರಣ್ ದಂಪತಿಗೆ ದಿ. ರಮಾನಾಥ ಎಸ್. ಪಯ್ಯಡೆ ಸ್ಮರಣಾರ್ಥ ’ವರ್ಷದ ಅತ್ಯುತ್ತಮ ಬಂಟ ಸಾಧಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ದಿ. ಶೆಫಾಲಿ ಹೆಗ್ಡೆ ರೈ ಬಂಟ ಮಹಿಳಾ ಸಾಹಸೋದ್ಯಮಿ ಪ್ರಶಸ್ತಿಯನ್ನು ಡಾ. ಶಾರದಾ ಸುಬ್ಬಯ್ಯ ಶೆಟ್ಟಿಯವರಿಗೆ ನೀಡಲಾಯಿತು. ಬಳಿಕ ಬಂಟ ಸಮುದಾಯದ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು.

Write A Comment