ಮಂಗಳೂರು, ಎ. 24 : ಬಿಜೈಕೆ.ಎಸ್.ಆರ್.ಟಿ.ಸಿ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಫರಂಗಿಪೇಟೆಯ ವಳಚ್ಚಿಲ್‌ಪದವು ನಿವಾಸಿ ಇಮ್ತಿಯಾಝ್ ಅಹ್ಮದ್ (30) ಮತ್ತು ಮುಲ್ಕಿ ಕಾರ್ನಾಡ್‌ನಿವಾಸಿ ಮುಸ್ತಫಾ (29) ಎಂದು ಗುರುತಿಸಲಾಗಿದೆ.
ಪೊಲೀಸರು ಆರೋಪಿಗಳಿಂದ ಸುಮಾರು 300 ಗ್ರಾಂ ತೂಕದ ಗಾಂಜಾ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬಿಜೈನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿಯನ್ನು ಆಧರಿಸಿ ಸಿಸಿಬಿ ಪೊಲೀಸರು ಸ್ಥಳಕ್ಕೆ ತೆರಳಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ 300 ಗ್ರಾಂ ಗಾಂಜಾ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಪೈಕಿ ಇಮ್ತಿಯಾಝ್ ಅಹ್ಮ್ಮದ್ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಹಾಗೂ ಕೊಲೆಯತ್ನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ಕ್ರಮದ ಬಗ್ಗೆ ಆರೋಪಿಗಳನ್ನು ಬರ್ಕೆ ಠಾಣೆಗೆ ಹಸ್ತಾಂತರಿಸಲಾಗಿದೆ.