ಕನ್ನಡ ವಾರ್ತೆಗಳು

ಬಹುನಿರೀಕ್ಷಿತ ತುಳು ಚಲನಚಿತ್ರ “ಎಕ್ಕಸಕ”ದ ಆಡಿಯೋ ಸಿ.ಡಿ ಬಿಡುಗಡೆ

Pinterest LinkedIn Tumblr

EkkaSaka_CD_Relese_1

ಮಂಗಳೂರು : ಲಕುಮಿ ಸಿನಿ ಕ್ರಿಯೇಶನ್ಸ್‌ರವರ ಬಹುನಿರೀಕ್ಷಿತ ತುಳು ಚಲನಚಿತ್ರ “ಎಕ್ಕಸಕ”ದ ಆಡಿಯೋ ಸಿ.ಡಿ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ಮಂಗಳೂರು ಹೊರವಲಯದ ಕೈಕಂಬ ಸ್ನೇಹ ಸದನ ಆಶ್ರಮದಲ್ಲಿ ಅಲ್ಲಿಯ ಮಕ್ಕಳೊಂದಿಗೆ ಅಚ್ಚುಕಟ್ಟಾಗಿ ಹಾಗೂ ವಿಶಿಷ್ಠವಾಗಿ ನೆರವೇರಿತು.

ಜಯಕಿರಣ ಸಂಸ್ಥೆಯ ಪ್ರಕಾಶ್ ಪಾಂಡೇಶ್ವರ್, ಚಿತ್ರದ ನಿರ್ಮಾಪಕರಾದ ಲಯನ್ ಕಿಶೋರ್ ಡಿ.ಶೆಟ್ಟಿ, ಲಯನ್ ಚಂದ್ರಹಾಸ್ ಶೆಟ್ಟಿ, ಲಯನ್ ಗಿರೀಶ್ ಶೆಟ್ಟಿ, ಚಿತ್ರದ ನಿರ್ದೇಶಕರಾದ ಕೆ. ಸೂರಜ್ ಶೆಟ್ಟಿ, ಹಾಡುಗಳಿಗೆ ಸಾಹಿತ್ಯ ಬರೆದಿರುವ ಮಯೂರ್ ಆರ್. ಶೆಟ್ಟಿ, ಡಿಬಿಸಿ ಶೇಖರ್, ಪ್ರಚಾರ ವಿನ್ಯಾಸಕರಾದ ದೇವಿ ರೈ, ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಕಲಾವಿದರಾದ ಹಿತೇಶ್ ನಾಯ್ಕ್ ಮತ್ತು ಸೋನಲ್ ಮೊಂತೆರೋ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಡಾ|| ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

EkkaSaka_CD_Relese_2 EkkaSaka_CD_Relese_3

ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಚಿತ್ರದ ನಿರ್ಮಾಪಕರಾದ ಲಯನ್ ಕಿಶೋರ್ ಡಿ.ಶೆಟ್ಟಿ ಅವರು, ಸಿನಿಮಾ ಚೆನ್ನಾಗಿ ಮೂಡಿ ಬಂದಿದ್ದು, ಎಲ್ಲರೂ ಸಿನಿಮಾವನ್ನು ನೋಡಿ ಆಶೀರ್ವದಿಸಬೇಕಾಗಿ ಕೇಳಿಕೊಂಡರು.

ಮಂಗಳೂರಿನವರೇ ಆದ ಹಿತೇಶ್ ನಾಯ್ಕ್ ಹಾಗೂ ಸೋನಲ್ ಮೊಂತೇರೊ ಪ್ರಮುಖ ಭೂಮಿಕೆಯಲ್ಲಿದ್ದು ತುಳುನಾಡಿನ ಖ್ಯಾತ ಕಲಾವಿದರಾದ ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ಸತೀಶ್ ಬಂದಲೆ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ಶೋಭರಾಜ್ ಪಾವೂರು, ಹರೀಶ್ ವಾಸು ಶೆಟ್ಟಿ, ರಾಘವೇಂದ್ರ ರೈ, ಉಮನಾಥ್ ಕೋಟ್ಯಾನ್, ಚೈತ್ರ ಶೆಟ್ಟಿ, ರವಿ ಸುರತ್ಕಲ್, ಪ್ರದೀಪ್ ಆಳ್ವ, ಜಯಶೀಲ, ಮೋಹನ್ ಕೊಪ್ಪಲ, ಗೋಕುಲ್ ಕದ್ರಿ, ಚಿದಾನಂದ ದುಬೈ ಮತ್ತು ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಅಚ್ಯುತ ರಾವ್, ಟೆನ್ನಿಸ್ ಕೃಷ್ಣ, ಸುಧಾ ಬೆಳವಾಡಿ ಪದ್ಮಜಾ ರಾವ್, ಶೋಭಾ ರೈ, ಕವಿತಾ ರೈ ಮತ್ತು ಬಾಲಿವುಡ್ ನಟಿ ಶ್ವೇತಾ ಶರ್ಮಾ ಮತ್ತಿತರರು ನಟಿಸಿದ್ದಾರೆ.

ಕನ್ನಡ ಸಿನಿಮಾದಲ್ಲಿ ಮಿಂಚಿರುವ ಉಗ್ರಂ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶಕ ಎಕ್ಕಸಕ ಸಿನಿಮಾಕ್ಕೆ ಕನ್ನಡ ಸಿನಿಮಾ ಜಗತ್ತಿನ ಹಿರಿಯ ಛಾಯಾಗ್ರಾಹಕ ಕೃಷ್ಣ ಸಾರಥಿ ಅದ್ಭುತವಾಗಿ ತನ್ನ ಪ್ರತಿಭೆಯನ್ನು ತೋರಿದ್ದಾರೆ. ನಟ ಕಿಚ್ಚ ಸುದೀಪ್‌ರವರ ಹಲವು ಸಿನಿಮಾಗಳಿಗೆ ಸಂಕಲನ ಮಾಡಿರುವ ಕೆ.ಆರ್. ಲಿಂಗರಾಜು ಇಲ್ಲಿಯೂ ತಮ್ಮ ಚಾಕಚಕ್ಯತೆಯನ್ನು ಮೆರೆದಿದ್ದಾರೆ.

EkkaSaka_CD_Relese_4 EkkaSaka_CD_Relese_5 EkkaSaka_CD_Relese_6

 

ನಟ ರವಿಚಂದ್ರನ ಸಿನಿಮಾಗಳಿಗೆ ಖಾಯಂ ಸೌಂಡ್ ಇಂಜಿನಿಯರ್ ಆಗಿರುವ ಹುಲಿವನ ನಾಗರಾಜ್ ಎಕ್ಕಸಕ ಸಿನಿಮಾದ ಧ್ವನಿ ತಾಂತ್ರಕತೆಯನ್ನು ಕೈಯಾಡಿಸಿದ್ದು ಕೊಚಾಡಿಯಾನ್ ತಮಿಳ್ ಸೂಪರ್ ಹಿಟ್ ಸಿನಿಮಾಕ್ಕೆ ಗ್ರಾಫಿಕ್ಸ್ ಕೆಲಸ ಮಾಡಿರುವ ಪ್ರಣವ್ ಲಿಯೋರವರು ಗ್ರಾಫಿಕ್ಸ್ ಕೆಲಸವನ್ನು ಮುಂಬೈನ ಹಾಗೂ ಬೆಂಗಳೂರಿನ ತಂತ್ರಜ್ಞರಿಂದ ಸಿನಿಮಾದ ವಿವಿಧ ಕೆಲಸ ಕಾರ್ಯ ನಡೆಸಲಾಗಿದೆ.

ಧನು ಕುಮಾರ್ ಕೋರಿಯೋಗ್ರಫಿ ಮಾಡಿದ್ದು, ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಮಯೂರ್ ಆರ್. ಶೆಟ್ಟಿ ಹಾಡುಗಳ ಸಾಹಿತ್ಯ ಬರೆದಿದ್ದು. ವಸಂತ್ ಅಮಿನ್ ಹಾಗೂ ಡಿಬಿಸಿ ಶೇಖರ್ ಎರಡು ಹಾಡುಗಳನ್ನು ಬರೆದಿದ್ದಾರೆ. ಸಿನಿಮಾದಲ್ಲಿ ಆರು ಹಾಡುಗಳಿವೆ. ಕನ್ನಡ ಸಿನಿಮಾದ ಹೆಸರಾಂತ ಗಾಯಕರಾದ ಚಂದನ್ ಶೆಟ್ಟಿ, ಅನುರಾದ ಭಟ್, ಸಂತೋಷ್ ವೆಂಕಿ, ತೆಲುಗು ಸಿನಿಮಾ ರೇಸ್ ಗುರ್ರಮ್‌ನ ಗಾಯಕ ಸಿಂಹರವರು ಒಂದು ಹಾಡಿಗೆ ಧ್ವನಿಗೂಡಿದ್ದಾರೆ.

ಇವರೆಲ್ಲರ ಜೊತೆ ದುಬೈನ ಹೆಸರಾಂತ ಯುವ ಉದ್ಯಮಿ ಹಾಗೂ ಖ್ಯಾತ ಹಿನ್ನೆಲೆ ಗಾಯಕರೂ ಆಗಿರುವ ಹರಿಶ್ ಶೇರಿಗಾರ್ ಹಾಗೂ ಅಕ್ಷತಾ ರಾವ್ ದುಬೈ ಇವರು ಹಾಡಿದ್ದಾರೆ. ದಿನಕರ ಶೆಟ್ಟಿ ಮತ್ತು ಮೋಹನ್ ಕೊಪ್ಪಲ ಕದ್ರಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಹಲವಾರು ಕನ್ನಡ ಹಾಗೂ ತುಳು ಸಿನಿಮಾದ ಪ್ರಚಾರವಿನ್ಯಾಸದಲ್ಲಿ ಕೈಯಾಡಿಸಿರುವ ದೇವಿ ರೈಯವರು ಈ ಸಿನಿಮಾದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದು, ಒಟ್ಟಾರೆ ಈ ಸಿನಿಮಾವು ಪ್ರೀತಿ-ಪ್ರೇಮದ ಜೊತೆಗೆ ಹಾಸ್ಯ-ಮನೋರಂಜನೆಯಿಂದ ಕೂಡಿದೆ ಎಂದು ಕಿಶೋರ್ ಡಿ. ಶೆಟ್ಟಿ ತಿಳಿಸಿದರು.

“ಎಕ್ಕಸಕ” ಚಿತ್ರದ ಮಹೂರ್ತ ಸಮಾರಂಭದ ವರದಿ ಹಾಗೂ ವಿಶೇಷ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

“Ekka saka” – Kasta Suka, the first gift of Lakumi team to Tulu film industry: The film will create history – Seetharam Kulal

Write A Comment