ಕನ್ನಡ ವಾರ್ತೆಗಳು

ದ.ಕ ಹಾಗೂ ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ.

Pinterest LinkedIn Tumblr

fishing_banned_1

ಮಂಗಳೂರು,ಮೇ.15: ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆಯಡಿ ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಜೂ.1ರಿಂದ ಜು.31ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿಗಳ ಮೂಲಕ ನಡೆಯುವ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಸಾಧನಗಳನ್ನು ಉಪಯೋಗಿಸಿ ಎಲ್ಲ ರೀತಿಯ ಯಾಂತ್ರೀಕೃ ತ  ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ. ಅಲ್ಲದೇ ಕೇಂದ್ರ ಕೃಷಿ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯ ಕರ್ನಾಟಕ ಸೇರಿದಂತೆ ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12 ರಿಂದ 200 ನಾಟಿಕಲ್ ಮೈಲಿ) ಜಲ ಪ್ರದೇಶದಲ್ಲಿ ಜೂನ್1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಏಕ ರೂಪದ ಮೀನುಗಾರಿಕೆ ನಿಷೇಧವನ್ನು ಜಾರಿಗೊಳಿಸಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲು ಮೀನುಗಾರಿಕೆ ಕಾಯ್ದೆಯಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಗುರಿಯಾಗುವರಲ್ಲದೆ, ಒಂದು ವರ್ಷದ ಅವಧಿಗೆ ಡೀಸಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಜಿಲ್ಲೆಯ ಸಮಸ್ತ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮಂಗಳೂರಿನ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Write A Comment